ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಮನವಿ ಮಾಡಿಕೊಳ್ಳಲು ಸಿದ್ದರಾಮಯ್ಯ ಅಭಿಮಾನಿ ಬಳಗದ ಸದಸ್ಯರು ಸೋಮವಾರ ರಾತ್ರಿ 300ಕ್ಕೂ ಹೆಚ್ಷು ವಾಹನಗಳಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.
ಮತ್ತೊಮ್ಮೆ ಬಾದಾಮಿಗೆ ಸಿದ್ದರಾಮಯ್ಯ ಎಂಬ ಪೋಸ್ಟರ್ ಹಿಡಿದುಕೊಂಡು ಪ್ರಯಾಣ ಮಾಡಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಆಗ್ರಹಿಸಲಿದ್ದಾರೆ.
ಬಾದಾಮಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಿದ್ದಾರೆ. ಇನ್ನಷ್ಟು ಅಭಿವೃದ್ಧಿಗೆ ಅವರೇ ಸ್ಪರ್ಧಿಸಬೇಕು ಎನ್ನುತ್ತಾರೆ ಕಾಂಗ್ರೆಸ್ ಮುಖಂಡ ಹೊಳೆಬಸು ಶೆಟ್ಟರ್.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.