ಬಾಗಲಕೋಟೆ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಶ್ರೀಶೈಲದಲ್ಲಿ ಯುಗಾದಿ ಪಾಡ್ಯವಾದ ಬುಧವಾರ ಮಲ್ಲಿಕಾರ್ಜುನನ ರಥೋತ್ಸವ ಸಂಭ್ರಮದಿಂದ ಜರುಗಿತು.
ಓಂ ನಮಃ ಶಿವಾಯ ಘೋಷಣೆ ಮುಗಿಲು ಮುಟ್ಟಿತ್ತು. ಬೆಳಿಗ್ಗೆಯಿಂದಲೇ ವಿವಿಧ ಪೂಜಾ ಕಾರ್ಯಗಳು ನಡೆದಿದ್ದವು.
ಬಾಗಲಕೋಟೆ, ವಿಜಯಪುರ, ಬೆಳಗಾವಿ, ರಾಯಚೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಸಾವಿರಾರು ಭಕ್ತರು ಭಾಗಿಯಾಗಿದ್ದರು.
ಮಂಗಳವಾರ ಸಂಜೆ ಹುಚ್ಚಯ್ಯನ ತೇರು ಜರುಗಿತ್ತು. ಬುಧವಾರ ರಥ ಎಳೆದು ಭಕ್ತರು ಸಂಭ್ರಮಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಕಾಲ್ನಡಿಗೆಯಲ್ಲಿ ಶ್ರೀಶೈಲಕ್ಕೆ ತೆರಳುತ್ತಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.