ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ಬೆಲೆ ನಿಗದಿ: ಮುಧೋಳ ಬಂದ್; ನಿಷೇಧಾಜ್ಞೆ ಜಾರಿ

Last Updated 16 ನವೆಂಬರ್ 2022, 7:22 IST
ಅಕ್ಷರ ಗಾತ್ರ

ಮುಧೋಳ (ಬಾಗಲಕೋಟೆ): ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತ ಸಂಘದ ಮುಖಂಡರು ಬುಧವಾರ ಮುಧೋಳ ಬಂದ್ ಮಾಡಿದ್ದಾರೆ. ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಅಂಗಡಿಗಳು ಮುಚ್ಚಿವೆ.

ಮುಧೋಳದಲ್ಲಿ ಬೆಳಿಗ್ಗೆಯಿಂದಲೇ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಜಮಖಂಡಿ, ನಿಪ್ಪಾಣಿ ಮುಂತಾದ ಕಡೆಗಳಿಂದ ಬಾಗಲಕೋಟೆಗೆ ಬರಬೇಕಾಗಿದ್ದ ಬಸ್‌ಗಳು ಬಂದಿಲ್ಲ. ಈ ಕಡೆಯಿಂದಲೂ ಯಾವುದೇ ಬಸ್‌ ಹೋಗಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಪ್ರತಿ ಟನ್‌ ಕಬ್ಬಿಗೆ ₹2,900 ದರ ನಿಗದಿ ಪಡಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ನಿಷೇಧಾಜ್ಞೆ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನ.16 ಬೆಳಿಗ್ಗೆಯಿಂದ ನ.19ರ ಮಧ್ಯರಾತ್ರಿಯವರೆಗೆ ಮುಧೋಳ ತಾಲ್ಲೂಕಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿಯೂ ರಸ್ತೆಗಳಲ್ಲಿ ಮರದ ದಿಮ್ಮಿ, ಮುಳ್ಳು ಕಂಟಿ ಹಾಕಿ ಸಂಚಾರ ಬಂದ್ ಮಾಡಲಾಗಿದೆ.

ರೈತರ ಹೋರಾಟ ಬೆಂಬಲಿಸಿ ಮುಧೋಳ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿಯುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT