ಮುದ್ದೇಬಿಹಾಳ: ತಾಲ್ಲೂಕಿನ ಯರಗಲ್ಲದಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆ ಗೋದಾಮಿನಲ್ಲಿ ಸಂದೇಹಾಸ್ಪದವಾಗಿ ಶೇಖರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಟೀ ಶರ್ಟ್ ಹಾಗೂ ಗೋಡೆ ಗಡಿಯಾರಗಳನ್ನು ಚುನಾವಣಾ ಅಧಿಕಾರಿಗಳು ಸೋಮವಾರ ಸಂಜೆ ವಶಕ್ಕೆ ಪಡೆದಿದ್ದಾರೆ.
ದಾಳಿಯಲ್ಲಿ ₹22 ಲಕ್ಷ ಮೌಲ್ಯದ ರಶೀದಿ ಸಿಕ್ಕಿದ್ದು, ಸರಕಿನ ಮೌಲ್ಯ ಇನ್ನೂ ಸ್ಪಷ್ಟವಾಗಿ ಗೊತ್ತಾಗಬೇಕಿದೆ. ಇವುಗಳ ಮೇಲೆ ಮಾಜಿ ಸಚಿವ ಎಸ್.ಆರ್.ಪಾಟೀಲರ ಭಾವಚಿತ್ರ, ಹೆಸರಿವೆ. ಪಾಟೀಲರು ದೇವರ ಹಿಪ್ಪರಗಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ವದಂತಿ ಹಬ್ಬಿದೆ. ಹೀಗಾಗಿ ಮತದಾರರಿಗೆ ಹಂಚಲ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.