ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪೀಡಿತ ಪ್ರದೇಶಕ್ಕೆ ಸಚಿವರ ಭೇಟಿ ಇಂದು

Published 16 ನವೆಂಬರ್ 2023, 18:31 IST
Last Updated 16 ನವೆಂಬರ್ 2023, 18:31 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಶುಕ್ರವಾರ ಜಿಲ್ಲೆಯ ಬರ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.

ಬೆಳಿಗ್ಗೆ 9.15ರಿಂದ ಮಧ್ಯಾಹ್ನ 1.30ರವರೆಗೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಬರಗಾಲ ಪೀಡಿತ ಪ್ರದೇಶಗಳಿಗೆ, ಮಧ್ಯಾಹ್ನ 2.30ರಿಂದ ಸಂಜೆ 6ರವರೆಗೆ ಜಮಖಂಡಿ ತಾಲ್ಲೂಕಿನ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ರೈತರ ಅಹವಾಲು ಆಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನಗರಸಭೆ: 18ಕ್ಕೆ ಜನತಾ ದರ್ಶನ

ಬಾಗಲಕೋಟೆ: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ನ.18 ರಂದು ಬೆಳಿಗ್ಗೆ 10.30ಕ್ಕೆ ನಗರಸಭೆಯ ನೂತನ ಸಭಾಭವನದಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ತಮ್ಮ ಬಡಾವಣೆಗಳಲ್ಲಿನ ಸಮಸ್ಯೆಗಳ ಕುರಿತ ಅಹವಾಲು ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ.20ಕ್ಕೆ ಜಿಲ್ಲೆಗೆ ಸಚಿವ ಎಚ್‌.ಕೆ. ಪಾಟೀಲ

ಬಾಗಲಕೋಟೆ: ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ನ.20ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 8.30ಕ್ಕೆ ಮಹಾಕೂಟಕ್ಕೆ ಭೇಟಿ ನೀಡಲಿದ್ದು, ಮಹಾಕೂಟೇಶ್ವರನ ದರ್ಶನ ಪಡೆಯಲಿದ್ದಾರೆ. ಬೆಳಿಗ್ಗೆ 9.30ರಿಂದ ಐಹೊಳೆಯ ಸ್ಮಾರಕಗಳ ವೀಕ್ಷಣೆ ನಡೆಸಲಿದ್ದಾರೆ. ಸಂಜೆ 4ಕ್ಕೆ ಇತಿಹಾಸಕಾರರು ಹಾಗೂ ತಜ್ಞರ ಜತೆಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 6ಕ್ಕೆ ಬನಶಂಕರಿ ದೇವಿ ದರ್ಶನ ಪಡೆಯಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT