ಭಾನುವಾರ, ಅಕ್ಟೋಬರ್ 25, 2020
27 °C

ಕೋವಿಡ್: ಹೊಸದಾಗಿ 115 ಪ್ರಕರಣ ದೃಢ, 81 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ನಿಂದ ಮತ್ತೆ 81 ಜನ ಗುಣಮುಖರಾಗಿ ಶುಕ್ರವಾರ ಮನೆಗೆ ತೆರಳಿದ್ದಾರೆ.

ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 4029 ಕ್ಕೆ ಏರಿಕೆಯಾಗಿದೆ ‌ ಇಂದು ಹೊಸದಾಗಿ 115 ಪ್ರಕರಣ ದೃಢಪಟ್ಟಿವೆ. ಇಲ್ಲಿಯವರೆಗೆ ಕೋವಿಡ್ ದೃಢಪಟ್ಟವರ ಸಂಖ್ಯೆ 4922ಕ್ಕೆ ಏರಿಕೆಯಾಗಿದೆ.

ಹೊಸದಾಗಿ  ಬಾಗಲಕೋಟೆ ತಾಲೂಕಿನಲ್ಲಿ 14, ಬಾದಾಮಿ 23, ಹುನಗುಂದ  14, ಬೀಳಗಿ 17, ಮುಧೋಳ 27, ಜಮಖಂಡಿ 17, ಹೊರ‌ ಜಿಲ್ಲೆಯ ಮೂವರಿಗೆ ಕೊರೊನಾ ದೃಢಪಟ್ಟಿದೆ.

ಸಕ್ರಿಯ ಪ್ರಕರಣ ಒಟ್ಟು 836 ಇವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದ್ದಾರೆ. 

ಜಿಲ್ಲಾ ಕೋವಿಡ್ ಲ್ಯಾಬ್ ನಲ್ಲಿ ಪರೀಕ್ಷಿಸಲಾಗುತ್ತಿದ್ದ 937 ಸ್ಯಾಂಪಲ್‍ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಪ್ರತ್ಯೇಕವಾಗಿ ನಿಗಾದಲ್ಲಿ ಇರುವವರು 551 ಇಲ್ಲಿಯವರೆಗೆ ಕಳುಹಿಸಲಾದ ಒಟ್ಟು ಸ್ಯಾಂಪಲ್ 48,462.ಒಟ್ಟು ನೆಗಟಿವ್ ಪ್ರಕರಣ 42,298, ಮೃತಪಟ್ಟವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು