ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಳಗಿ | ಮೃತರ ಪಟ್ಟಿಯಲ್ಲಿ 28 ಮತದಾರರು!

ಅಧಿಕಾರಿಗಳ ಲೋಪ: ಮತದಾನಕ್ಕೆ ಸಿಗಲಿಲ್ಲ ಅವಕಾಶ
Published 7 ಮೇ 2024, 15:51 IST
Last Updated 7 ಮೇ 2024, 15:51 IST
ಅಕ್ಷರ ಗಾತ್ರ

ಬೀಳಗಿ(ಬಾಗಲಕೋಟೆ ಜಿಲ್ಲೆ): ತಾಲ್ಲೂಕಿನ ನಾಗರಾಳ ಗ್ರಾಮದ ವಾರ್ಡ್ ಸಂಖ್ಯೆ–2ರಲ್ಲಿ ಮಂಗಳವಾರ 28 ಮತದಾರರ ಹೆಸರು ಮೃತರ ಪಟ್ಟಿಯಲ್ಲಿ ದಾಖಲಾಗಿರುವುದಕ್ಕೆ ಆಕ್ಷೇಪ ವ್ಯಕ್ತವಾಯಿತು.

‘28 ಜನರ ಹೆಸರು ಮೃತರ ಪಟ್ಟಿಯಲ್ಲಿ ದಾಖಲಾಗಿದೆ. ಹೀಗಾಗಿ ಅವರು ಯಾರೂ ಸಹ ಮತದಾನ ಮಾಡಲು ಅವಕಾಶವಿಲ್ಲ’ ಎಂದು ಚುನಾವಣಾಧಿಕಾರಿ ಹೇಳಿದರು. ಇದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸಿದರು.

ಪರಿಸ್ಥಿತಿ ತಿಳಿಗೊಳಿಸಿದ ತಹಶಿಲ್ದಾರ್‌ ಸಂತೋಷ ಮ್ಯಾಗೇರಿ, ‘ಅರ್ಜಿ ಹಾಕುವ ಸಂದರ್ಭದಲ್ಲಿ ಸಿಎಸ್‌ಸಿ ಕೇಂದ್ರ, ಬಿಎಲ್ಒ ಅಥವಾ ಗ್ರಾಮ ಆಡಳಿತಾಧಿಕಾರಿಗಳಿಂದ ಲೋಪ ಆಗಿರಬಹುದು. ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ’ ಎಂದರು. ನಂತರ ಮತದಾನ ಪ್ರಕ್ರಿಯೆ ಮುಂದುವರಿಯಿತು.‌ ಆದರೆ, ಆ 28 ಮತದಾರರಿಗೆ ಮತದಾನಕ್ಕೆ ಅವಕಾಶ ಸಿಗದ ಕಾರಣ, ನಿರಾಸೆಯಿಂದ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT