ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ಕೊಟ್ಟು ಹೋರಾಟ ಕೈಗೊಳ್ಳಿ: ಜನಸಾಮಾನ್ಯರ ಪಾರ್ಟಿ ಅಧ್ಯಕ್ಷ

ಮೀಸಲಾತಿ ಹೋರಾಟ: ರಾಜಕೀಯ ಮುಖಂಡರಿಗೆ ಜನಸಾಮಾನ್ಯರ ಪಾರ್ಟಿ ಒತ್ತಾಯ
Last Updated 25 ನವೆಂಬರ್ 2020, 14:23 IST
ಅಕ್ಷರ ಗಾತ್ರ

ಬಾಗಲಕೋಟೆ: ಜಾತಿವಾರು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟಗಳ ನೆಪದಲ್ಲಿ ರಾಜಕೀಯ ಮುಖಂಡರು ಜನ ಸಾಮಾನ್ಯರನ್ನು ಎತ್ತಿಕಟ್ಟದೇ ವಿಧಾನಮಂಡಲದ ಒಳಗೆ ಶಾಂತಿಯುತವಾಗಿ ಹೋರಾಟ ನಡೆಸಲಿ ಎಂದು ಜನಸಾಮಾನ್ಯರ ಪಾರ್ಟಿ ಅಧ್ಯಕ್ಷ ಯಲ್ಲಪ್ಪ ಹೆಗಡೆ ಆಗ್ರಹಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವಂತೆ ಹೋರಾಟ ಸಚಿವ ಬಿ.ಶ್ರೀರಾಮುಲು ಕೈಗೆತ್ತಿಕೊಂಡಿದ್ದಾರೆ. ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವಂತೆ ಆಗ್ರಹಿಸಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಹೋರಾಟ ನಡೆದಿದೆ. ಪಂಚಮಸಾಲಿಗಳನ್ನು ಪ್ರವರ್ಗ 2ಎಗೆ ಸೇರಿಸಲು ನಡೆದಿರುವ ಹೋರಾಟದ ಮುಂದಾಳತ್ವ ಶಾಸಕ ಮುರುಗೇಶ ನಿರಾಣಿ ವಹಿಸಿಕೊಂಡಿದ್ದಾರೆ.

ಹೋರಾಟದ ಮುಂಚೂಣಿಯಲ್ಲಿ ಬಿಜೆಪಿ ನಾಯಕರೇ ಇದ್ದು, ಕೇಂದ್ರ ಹಾಗೂ ರಾಜ್ಯದಲ್ಲಿ ಅವರದ್ದೇ ಪಕ್ಷದ ಸರ್ಕಾರಗಳು ಇವೆ. ಹೀಗೆ ಜನರನ್ನು ಎತ್ತಿಕಟ್ಟಿ ಬೀದಿಗಿಳಿಸುವ ಬದಲು ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿ ಬೇಡಿಕೆ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಆಗ್ರಹಿಸಿದರು.

ಜಾತಿ–ಜಾತಿಗಳ ನಡುವೆ ಕಿತ್ತಾಟ ಹಚ್ಚುವ ಬಿಜೆಪಿಯ ಈ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷ ಕೂಡ ಪರೋಕ್ಷವಾಗಿ ನೆರವಾಗುತ್ತಿದೆ. ರಾಜಕೀಯ ಮುಖಂಡರು ತಮ್ಮ ಸ್ವಾರ್ಥಕ್ಕಾಗಿ ಸಮಾಜದಲ್ಲಿ ಶಾಂತಿ ಭಂಗ ತರಲು ಇಂತಹ ಹೋರಾಟಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಅದಕ್ಕೆ ಆಯಾ ಸಮುದಾಯದವರು ಹೆಚ್ಚಿನ ಮಹತ್ವ ನೀಡುವುದು ಬೇಡ. ಕಾನೂನು ಹೋರಾಟದ ಮೂಲಕ ಮೀಸಲಾತಿ ಹಕ್ಕುಗಳನ್ನು ಪಡೆಯಲು ಮುಂದಾಗಲಿ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ತುಕಾರಾಮ ಮ್ಯಾಗಿನಮನಿ, ಶ್ರೀಕಾಂತ ಚಿನಿವಾಲ, ಕೃಷ್ಣಾ ಮುಧೋಳ, ತಿಪ್ಪಣ್ಣ ಯಡಹಳ್ಳಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT