ಶುಕ್ರವಾರ, ನವೆಂಬರ್ 27, 2020
18 °C
ಸಹಾಯಕ ಎಂಜಿನಿಯರ್ ಮನೆಯ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ಬಾಗಲಕೋಟೆ: ₹5.15 ಲಕ್ಷ ಮೊತ್ತದ ನಿಷೇಧಿತ ನೋಟು ಪತ್ತೆ !

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯ್ತಿ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ಉಪ ವಿಭಾಗದ ಸಹಾಯಕ ಎಂಜಿನಿಯರ್ ಅಶೋಕ ತೋಪಲಕಟ್ಟಿ ಅವರ ಮನೆಯ ಮೇಲೆ ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ₹ 5.15 ಲಕ್ಷ ಮೊತ್ತದ ಹಳೆಯ ನಿಷೇಧಿತ ಹಳೆಯ ನೋಟುಗಳು ಪತ್ತೆಯಾಗಿವೆ.

ಬಾಗಲಕೋಟೆಯ ವಿದ್ಯಾಗಿರಿ ಎಂಟನೇ ಕ್ರಾಸ್‌ನಲ್ಲಿರುವ ಅಶೋಕ ಅವರ ಮನೆ, ನವನಗರದ ಸೆಕ್ಟರ್ ನಂ 17ರಲ್ಲಿ ಪತ್ನಿಯ ಹೆಸರಿನಲ್ಲಿರುವ ಮಹಾಲಕ್ಷ್ಮೀ ಗ್ಯಾಸ್ ಏಜೆನ್ಸಿ ಹಾಗೂ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿ ಮೇಲೆ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ವೇಳೆ ನಿಷೇಧಿತ ನೋಟುಗಳಲ್ಲದೇ ₹5.18 ಲಕ್ಷ ನಗದು, ₹64,53 ಲಕ್ಷ ಮೌಲ್ಯದ ಚಿನ್ನಾಭರಣ, ₹5.54 ಮೊತ್ತದ 8568 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಶೋಧನಾ ಕಾರ್ಯ ನಡೆದಿದೆ.

ಎಸಿಬಿ ಬೆಳಗಾವಿ ಉತ್ತರ ವಲಯದ ಎಸ್ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ಬಾಗಲಕೋಟೆ ಎಸಿಬಿ ಡಿವೈಎಸ್ಪಿ ಗಣಪತಿ ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿ ನಡೆಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು