ಗುರುವಾರ , ಜುಲೈ 29, 2021
24 °C

ಬಾಗಲಕೋಟೆ: ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ, ನಿವಾಸದ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬಾಗಲಕೋಟೆ: ಇಲ್ಲಿನ ಭೂ ದಾಖಲೆಗಳ ಉಪನಿರ್ದೇಶಕ ಗೋಪಾಲ ಮಾಲಗತ್ತಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಬಾಗಲಕೋಟೆಯ ನವನಗರದಲ್ಲಿರುವ ಗೋಪಾಲ ಅವರ ಸರ್ಕಾರಿ ನಿವಾಸ ಹಾಗೂ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.

ಗೋಪಾಲ ಮಾಲಗತ್ತಿ ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದಾರೆ ಎಂಬ ದೂರು ಅವರು ಈ ಹಿಂದೆ ಕೆಲಸ ಮಾಡುತ್ತಿದ್ದ ಕೊಪ್ಪಳದಲ್ಲಿ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಕೊಪ್ಪಳ, ವಿಜಯಪುರದಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಎಸಿಬಿ ಡಿವೈಎಸ್ಪಿ ವಿಶ್ವನಾಥ ಚೌಗಲೆ ಸೇರಿದಂತೆ ಎಂಟು ಸಿಬ್ಬಂದಿ ಪರಿಶೀಲನಾ ಕಾರ್ಯದಲ್ಲಿ ತೊಡಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು