ಸೋಮವಾರ, ಏಪ್ರಿಲ್ 6, 2020
19 °C
ಬೆಂಗಳೂರಿನಿಂದ ತರಾತುರಿಯಲ್ಲಿ ಊರಿಗೆ ಹೊರಟವರು ಮಸಣ ಸೇರಿದರು

ಕಾರು ಅಪಘಾತ: ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಕೋವಿಡ್–19 ಹರಡುವಿಕೆ ಭೀತಿಯಿಂದ ವಿಧಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತರಾತುರಿಯಲ್ಲಿ ಊರಿಗೆ ಹೊರಟವರು ಅಪಘಾತದಲ್ಲಿ ಮಸಣ ಸೇರಿದ್ದಾರೆ. ಇಳಕಲ್ ಸಮೀಪ ಹಿರೇಕೊಡಗಲಿ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ ಟೈರ್ ಸಿಡಿದು ಕಾರು ಉರುಳಿ ಬಿದ್ದಿದೆ. ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಕಾರು ಬೆಂಗಳೂರಿನಿಂದ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿಗೆ ಹೊರಟಿತ್ತು. ಕಾರಿನಲ್ಲಿದ್ದ ಸುವರ್ಣಾ (32) ಹಾಗೂ ಬಸವಣ್ಣೆಪ್ಪ (81) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಿತಾ (22) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾದರು.

ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹುಂಡೈ ವೆರ್ನಾ ಕಾರು ಟೈರ್ ಸಿಡಿಯುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಅಲ್ಲಿದ್ದ ಕಲ್ಲು ಬಂಡೆಗಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಯಶ್, ಜಾಹ್ನವಿ ಹಾಗೂ ಚಾಲಕ ಪ್ರಭು ಗಾಯಗೊಂಡಿದ್ದಾರೆ. ಅವರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು