ಸೋಮವಾರ, ಜೂನ್ 21, 2021
27 °C

ಬಾಗಲಕೋಟೆ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲಿಯೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಹುನಗುಂದ ತಾಲ್ಲೂಕಿನ ಬೇವಿನಮಟ್ಡಿ ಕ್ರಾಸ್ ಬಳಿ ಭಾನುವಾರ ತಡರಾತ್ರಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇಳಕಲ್ ನಗರದ ನಿವಾಸಿಗಳಾದ ಚಂದ್ರಶೇಖರ ಬುಟ್ಟಾ (22), ನವೀನ್ ಸಾಕಾ (20), ಚೆನ್ನಬಸವ ಅಂಜಿ (22) ಹಾಗೂ ಬಸವರಾಜ ಭಂಡಾರಿ (33) ಮೃತಪಟ್ಡವರು. ಚಾಲಕ ವಿಜಯಕುಮಾರ ಬಂಡಿ ತೀವ್ರ ಗಾಯಗೊಂಡಿದ್ದು ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಳೇದಗುಡ್ಡ ಪಟ್ಟಣದಲ್ಲಿ ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವಾಗ ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಕಾರಿನ ಚಾಲಕ ಹಾಗೂ ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಆಧರಿಸಿ ಲಾರಿ, ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು