ಬಾದಾಮಿ: ‘ಗ್ರಾಮೀಣ ಪ್ರದೇಶದ ರೋಗಿಗಳಿಗೆ ಸೌಲಭ್ಯ ಕಲ್ಪಿಸಲು ಕೋಟಕ್ ಮಹಿಂದ್ರಾ ಬ್ಯಾಂಕ್ ಆಂಬ್ಯುಲನ್ಸ್ ದೇಣಿಗೆ ನೀಡಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಸುತ್ತಲಿನ ಪ್ರದೇಶದ ಜನರು ಸದುಪಯೋಗ ಪಡೆಯಬೇಕು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ತಾಲ್ಲೂಕು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಸೋಮವಾರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಆಂಬುಲೆನ್ಸ್ಗೆ ಚಾಲನೆ ನೀಡಿ ಬೇಲೂರ-ಜಾಲಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅವರು ಹಸ್ತಾಂತರಿಸಿದರು.

‘ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅನುಕೂಲ ಕಲ್ಪಿಸಲು ₹ 35 ಲಕ್ಷ ಮೌಲ್ಯದ ಆಂಬುಲೆನ್ಸ್ ದೇಣಿಗೆ ಕೊಡಲಾಗಿದೆ. ಜನರು ಸದುಪಯೋಗ ಪಡೆಯಿರಿ’ ಎಂದು ಹುಬ್ಬಳ್ಳಿಯ ಕೋಟಕ್ ಮಹಿಂದ್ರಾ ಬ್ಯಾಂಕ್ನ ಅಸೋಸಿಯೇಟ್ ಉಪಾಧ್ಯಕ್ಷ ಈರಯ್ಯ ನಿರ್ವಾಣಿ ಹೇಳಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಹಿರೇಮಠ, ವಿಜಯಪುರ-ಬಾಗಲಕೋಟೆ ಜಿಲ್ಲೆಗಳ ಹಾಲು ಒಕ್ಕೂಟದ ಅಧ್ಯಕ್ಷ ಈರಣ್ಣ ಕರಿಗೌಡ್ರ, ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ, ಬಾಗಲಕೋಟೆ ಉಪವಿಭಾಗ ಅಧಿಕಾರಿ ಸಂತೋಷ ಜಗಲಾಸರ, ಡಿಎಚ್ಒ ಎ. ಮಂಜುನಾಥ, ತಹಶೀಲ್ದಾರ್ ಮಧುರಾಜ, ಟಿಎಚ್ಒ ಡಾ.ಎಂ.ಬಿ. ಪಾಟೀಲ, ಡಾ. ವಾಸುದೇವರಾವ್ ಇದ್ದರು.

ಬೇಲೂರ-ಜಾಲಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.