ಅಮೀನಗಡ : ಪಟ್ಟಣದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ನಂ.2 ಶಾಲೆಗೆ ಮಂಗಳವಾರ ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ಭೇಟಿ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಎಲ್ಕೆಜಿ, ಯುಕೆಜಿ ಹಾಗೂ 1 ರಿಂದ 8 ನೇ ತರಗತಿ ಪ್ರಾರಂಭವಾಗಿದ್ದು, ಪಟ್ಟಣದ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಅವರು ಕೋರಿದರು.

ದ್ವಿಭಾಷಾ ಬೋಧನೆ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಪೌಷ್ಟಿಕ ಆಹಾರ ಜೊತೆಗೆ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿದೆ. ಖಾಸಗಿ ಶಾಲೆಯಿಂದ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಪಿ.ಎಂ.ಶ್ರೀ ಶಾಲೆಗೆ ದಾಖಲಾತಿ ಆಗಿದ್ದಾರೆ. ಈ ಶೈಕ್ಷಣಿಕ ವರ್ಷದಿಂದ 8 ನೇ ತರಗತಿ ಕೂಡ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳ ಮಾದರಿ ಶಾಲೆಯಾಗಿ ಪರಿವರ್ತನೆಯಾಗಲಿದೆ ಎಂದರು. ಶಿಕ್ಷಕರಾದ ಎಸ್.ಎಸ್.ಲಮಾಣಿ, ಮಲ್ಲಿಕಾರ್ಜುನ ಸಜ್ಜನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-19-2055933599

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.