ಅಮೀನಗಡ: ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕೋರಿದರು.

ಸೋಮವಾರ ಬಾಗಲಕೋಟೆ ಮತಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಗ್ರಾಮೀಣ ಪ್ರದೇಶದಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

ಐಹೊಳೆ, ನಿಂಬಲಗುಂದಿ, ಕಳ್ಳಿಗುಡ್ಡ, ಬೇವಿನಾಳ, ಮುಳ್ಳೂರು,ಹೂವಿನಹಳ್ಳಿ, ಹಿರೇಮಾಗಿ, ಕಡಿವಾಲ, ಮಾದಾಪೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು ಪಂಚ ಗ್ಯಾರಂಟಿ ಸೇರಿದಂತೆ ಜನಪರ ಯೋಜನೆಗಳ ಮೂಲಕ ಕಾಂಗ್ರೆಸ್ ಸರ್ಕಾರ ಬಡವರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ಬಡ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಬಹುದಿನದ ಕನಸಾಗಿದ್ದ ಮೆಡಿಕಲ್ ಕಾಲೇಜನ್ನು ಸ್ಥಾಪನೆ ಮಾಡಲು ಎಚ್. ವೈ ಮೇಟಿ ಶ್ರಮಿಸುವ ಮೂಲಕ ಈ ಭಾಗದ ಜನಪರ ಕಾರ್ಯಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದರು.

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಮಹೇಶ್ ಹೊಸಗೌಡ್ರ, ಸಂಗಣ್ಣ ಹಂಡಿ ಸೇರಿದಂತೆ ಕಾರ್ಯಕರ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-19-1074004975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.