ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಸ್ತಿ ತೆರಿಗೆ ವಸೂಲಿಗೆ ವಿನೂತನ ಕಾರ್ಯಕ್ರಮ

Published 22 ನವೆಂಬರ್ 2023, 15:52 IST
Last Updated 22 ನವೆಂಬರ್ 2023, 15:52 IST
ಅಕ್ಷರ ಗಾತ್ರ

ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯಲ್ಲಿ ಪಟ್ಟಣ ಪಂಚಾಯ್ತಿ ವತಿಯಿಂದ ಆಸ್ತಿ ತೆರಿಗೆ ವಸೂಲಾತಿಗೆ ವಿವಿಧ ವಾದ್ಯಗಳನ್ನು ಬಾರಿಸಿ ಬುಧವಾರ ವಿನೂತನವಾಗಿ ಕಾರ್ಯಕ್ರಮ ನಡೆಸಲಾಯಿತು.

ಪಂಚಾಯ್ತಿಯ ಪೌರಕಾರ್ಮಿಕರು, ನೀರು ಸರಬರಾಜು ಸಿಬ್ಬಂದಿ ಹಾಗೂ ಕಚೇರಿ ಸಿಬ್ಬಂದಿ ಸೇರಿ ಆಸ್ತಿ ತೆರಿಗೆ ಬಾಕಿ ಇರುವ ಮನೆಗಳಿಗೆ ತೆರಳಿ ಹಲಿಗೆ, ಕೈತಾಳ ಹಾಗೂ ಶಹನಾಯಿ ಬಾರಿಸಿ ಆಸ್ತಿ ತೆರಿಗೆ ಪಾವತಿಸುವಂತೆ ಜಾಗೃತಿ ಮೂಡಿಸಿದರು.

ಮುಖ್ಯಾಧಿಕಾರಿ ಎನ್.ಎ.ಲಮಾಣಿ ಮಾತನಾಡಿ, ಸಾರ್ವಜನಿಕ ಆಸ್ತಿಗಳ ಪುನಃ ನವೀಕರಣಗೊಳಿಸಲು ಮತ್ತು ಪಟ್ಟಣದ ಅಭಿವೃದ್ಧಿಗೆ ವಿವಿಧ ತೆರಿಗೆ ಸಂಗ್ರಹಗಳ ಜೊತೆಗೆ ಆಸ್ತಿ ತೆರಿಗೆ ಸಂಗ್ರಹ ಪ್ರಮುಖವಾಗಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ನೀಡುವ ತೆರಿಗೆ ಒಂದು ಆಸ್ತಿಯಾಗಿದ್ದು, ಸಾರ್ವಜನಿಕರು ಆಸ್ತಿ ತೆರಿಗೆ ಪಾವತಿಸಿ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಪರಶುರಾಮ ನಾಗನೂರ, ಸಂತೋಷ ಚವಾಣ, ಸುರೇಶ ಹರಿಜನ, ಶಿವಾನಂದ ಚೌಧರಿ, ಸಚಿನ್ ಕಾಸರ, ಶಿವಾನಂದ ಸುನ್ನಾಳ, ಶಿವಾನಂದ ಬಾವಿಮನಿ, ಮುತ್ತು ಶೀಲವಂತ ಇದ್ದರು.

ಮಹಾಲಿಂಗಪುರ ಸಮೀಪದ ರನ್ನಬೆಳಗಲಿಯಲ್ಲಿ ಪಟ್ಟಣ ಪಂಚಾಯ್ತಿ ವತಿಯಿಂದ ಆಸ್ತಿ ತೆರಿಗೆ ವಸೂಲಾತಿಗೆ ವಾದ್ಯಗಳನ್ನು ಬಾರಿಸುವ ಮೂಲಕ ವಿನೂತನವಾಗಿ ಕಾರ್ಯಕ್ರಮ ನಡೆಸಲಾಯಿತು.
ಮಹಾಲಿಂಗಪುರ ಸಮೀಪದ ರನ್ನಬೆಳಗಲಿಯಲ್ಲಿ ಪಟ್ಟಣ ಪಂಚಾಯ್ತಿ ವತಿಯಿಂದ ಆಸ್ತಿ ತೆರಿಗೆ ವಸೂಲಾತಿಗೆ ವಾದ್ಯಗಳನ್ನು ಬಾರಿಸುವ ಮೂಲಕ ವಿನೂತನವಾಗಿ ಕಾರ್ಯಕ್ರಮ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT