ರಬಕವಿ ಬನಹಟ್ಟಿ: ಇಲ್ಲಿನ ಶಂಕರಲಿಂಗ ದೇವಸ್ಥಾನದ ಟ್ರಸ್ಟ್ ಸದಸ್ಯರು ಮಲ್ಲಿಕಾರ್ಜುನ ದೇವರ ಜಾತ್ರೆಯ ಅಂಗವಾಗಿ ಈಚೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದರು.
ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಾಲಚಂದ್ರ ಉಮದಿ ಮಾತನಾಡಿ, ಮಲ್ಲಿಕಾರ್ಜುನ ದೇವರ ಜಾತ್ರೆಯ ಸಂದರ್ಭದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಣೆ ಮಾಡುತ್ತಿರುವುದು ವಿಶೇಷವಾಗಿದೆ. ಇದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಜಾತ್ರೆಗೆ ವಿವಿಧ ಜಿಲ್ಲೆಗಳ ನಗರ ಮತ್ತು ಗ್ರಾಮೀಣ ಭಾಗದಿಂದ ಬರುವ ಪಲ್ಲಕ್ಕಿಗಳು ಕೃಷ್ಣಾ ನದಿಯಲ್ಲಿ ಮಡಿ ಸ್ನಾನ ಮಾಡಿಕೊಂಡು ಜಾತ್ರೆಗೆ ಬರುವುದು ರೂಢಿಯಾಗಿದೆ.