ಗುಳೇದಗುಡ್ಡ: ಈಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಪಟ್ಟಣದ ಭಂಡಾರಿ ಮತ್ತು ರಾಠಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸದ (21) ಅವರ ಮನೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭಾನುವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ವಿದ್ಯಾರ್ಥಿನಿಯ ತಾಯಿ ರಾಜೇಶ್ವರಿ, ‘ಮಗಳು ಕುಟುಂಬದ ಆಧಾರ ಸ್ತಂಭವಾಗಿದ್ದಳು. ಅವಳು ತನ್ನ ಸಹಪಾಠಿಗಳ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವಳ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಕೊಡಿಸಬೇಕು’ ಎಂದು ಶಾಸಕರಿಗೆ ಮನವಿ ಮಾಡಿಕೊಂಡರು.

ಅದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಪಿಎಸ್ಐ ಸಿದ್ದಣ್ಣ ಯಡಹಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ, ರಂಗನಾಥ ಮೊಕಾಶಿ, ಗೋಪಾಲ ಭಟ್ಟಡ, ಕುಟುಂಬದವರು ಇದ್ದರು.

ತನಿಖೆಗೆ ಸಹಕಾರ ನೀಡುತ್ತೇವೆ: ಪಟ್ಟಣಶೆಟ್ಟಿ

‘ಈಚೆಗೆ ನಮ್ಮ ಸಂಸ್ಥೆಯ ವಿದ್ಯಾರ್ಥಿನಿ ಅಂಜಲಿ ಮುಂಡಾಸದ ಆತ್ಮಹತ್ಯೆ ಮಾಡಿಕೊಂಡಿದ್ದು ನೋವಿನ ಸಂಗತಿ. ಪೊಲೀಸರ ತನಿಖೆಗೆ ಸಂಸ್ಥೆಯಿಂದ ಸಂಪೂರ್ಣ ಸಹಕಾರ ನೀಡಲಿದ್ದೇವೆ’ ಎಂದು ಪಿಇಟ್ರಸ್ಟ್ ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ ಹೇಳಿದರು. ‘ಅಂದು ಅವಳು ಸ್ನೇಹಿತರ ಜೊತೆ ಇದ್ದದ್ದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಅದನ್ನು ಪೊಲೀಸರಿಗೆ ನೀಡಲಾಗಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ಸಹಪಾಠಿಗಳಿಂದ ಕಿರುಕುಳ ನೀಡಿರುವ ದೂರುಗಳು ಪ್ರಾಚಾರ್ಯರಿಗಾಗಲಿ ಆಡಳಿತ ಮಂಡಳಿಯವರಿಗೆ ಸಲ್ಲಿಕೆಯಾಗಿಲ್ಲ. ಆದರೂ ಕಿರುಕುಳ ನೀಡಿರುವ ವಿದ್ಯಾರ್ಥಿಗಳ ವಿರುದ್ಧ ಸಂಸ್ಥೆ ಸೂಕ್ತ ಕ್ರಮ ಕೈಗೊಳ್ಳುವುದು’ ಎಂದರು. ಸಂಸ್ಥೆಯ ಪ್ರಾಚಾರ್ಯರು ನಿರ್ದೇಶಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.