ಬಾಗಲಕೋಟೆ: ಜಿಲ್ಲೆಯನ್ನು ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರವು ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅದಕ್ಕೆ ಸಾಕಷ್ಟು ಅನುದಾನ ಕೂಡ ಒದಗಿಸುತ್ತಿದೆ. ಯೋಜನೆ ಹಾಗೂ ಅನುದಾನವನ್ನು ಸಮರ್ಪಕ ಹಾಗೂ ಪ್ರಾಮಾಣಿಕವಾಗಿ ಅರ್ಹರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ. ಒಂದು ವೇಳೆ ಅಧಿಕಾರಿ, ಸಿಬ್ಬಂದಿ ಭ್ರಷ್ಟಾಚಾರ ನಡೆಸಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಮುಲಾಜಿಲ್ಲದೇ ಶಿಸ್ತುಕ್ರಮ ವಹಿಸಲಾಗುವುದು ಎಂದರು.

ಸರ್ಕಾರವು ನೌಕರರಿಗೆ ಅನೇಕ ಸವಲತ್ತುಗಳನ್ನು ನೀಡಿದೆ. ಅದರಲ್ಲಿ ಉತ್ತಮ ಜೀವನ ಸಾಗಿಸಬಹುದಾಗಿದೆ. ಆದರೆ, ಕೆಲ ಅಧಿಕಾರಿಗಳು, ಸಿಬ್ಬಂದಿ ಅತಿ ಆಸೆಗಾಗಿ ಭ್ರಷ್ಟಾಚಾರದಲ್ಲಿ ತೊಡಗಿರುವ ಕುರಿತು ದೂರಗಳು ಬಂದಿದ್ದು, ಭ್ರಷ್ಟಾಚಾರ ಸಾಬೀತಾದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗೆ ಅವರದೇ ಆದಂತಹ ಕಾರ್ಯಗಳನ್ನು ಕೊಡಲಾಗಿರುತ್ತದೆ. ಈ ಕಾರ್ಯ ಪರೀಶಿಲನೆಗಾಗಿ ಮೇಲುಸ್ತುವಾರಿ ನೇಮಿಸಲಾಗಿದ್ದರೂ ಸಹ ಕಾರ್ಯಗಳು ಸುಗಮವಾಗಿ ಆಗುತ್ತಿಲ್ಲ. ಒಬ್ಬ ವ್ಯಕ್ತಿ ಒಂದೇ ಕೆಲಸಕ್ಕೆ ಪದೇ ಪದೇ ಕಚೇರಿಗೆ ಬರುವಂತಾಗಿದೆ. ಇದರರ್ಥ ಕಚೇರಿಯಲ್ಲಿ ಕೆಲಸಗಳು ಸುಗಮವಾಗಿ ಸಾಗುತ್ತಿಲ್ಲ ಎಂದರ್ಥವಾಗುತ್ತದೆ. ದುರಾಸೆಗೊಳಗಾಗಿ ನೀವು ಮಾಡುವ ತಪ್ಪಿಗೆ ನಿಮ್ಮ ಹೆಂಡತಿ, ಮಕ್ಕಳು ಮುಜುಗುರ ಎದುರಿಸಬೇಕಾಗುತ್ತದೆ. ಪ್ರಾಮಾಣಿಕರಾ ಕಾರ್ಯ ನಿರ್ವಹಿಸಬೇಕು ಎಂದರು.

ಸಾರ್ವಜನಿಕ ಸೇವೆಯಲ್ಲಿ ಇರುವ ಪ್ರತಿಯೊಬ್ಬರೂ ಲೋಕಾಯುಕ್ತ ಕಾಯ್ದೆ ಅರಿವು ಹೊಂದಿರಬೇಕು. ಈ ಕಾಯ್ದೆಯಡಿ ಕಾರ್ಯ ನಿರ್ವಹಿಸುವವರು ಮಾಡುವ ತಪ್ಪು ಸಣ್ಣದಾಗಲಿ, ದೊಡ್ಡದಾಗಲಿ ಅದಕ್ಕೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಲೋಕಾಯುಕ್ತ ಕಾರ್ಯದರ್ಶಿ ಶ್ರೀನಾಥ ಕೆ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ ರುಥ್ರೇನ್, ಬಾಗಲಕೋಟೆ ಲೋಕಾಯುಕ್ತ ಎಸ್ ಪಿ ಮಲ್ಲೇಶ ಇದ್ದರು.

ಕೆರೆಗಳನ್ನು ರಕ್ಷಿಸಿ:

ಜಿಲ್ಲೆಯಲ್ಲಿನ ಕೆರೆಗಳ ರಕ್ಷಣೆ ಹಾಗೂ ಸೂಕ್ತ ನಿರ್ವಹಣೆಯಾಗಬೇಕು. ಇವುಗಳ ಸೂಕ್ತ ನಿರ್ವಹಣೆ ಹಾಗೂ ರಕ್ಷಣೆ ಮಾಡುವುದು ಸಂಬಂಧಿಸಿದ ಅಧಿಕಾರಿಯ ಮೂಲ ಕರ್ತವ್ಯವಾಗಿದೆ. ಈ ಕುರಿತು ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣಗಳು ದಾಖಲಾಗಿದ್ದು ಇದನ್ನು ಗಂಭೀರಾವಗಿ ಪರಿಗಣಿಸಲಾಗುವುದು ಎಂದು ಹೇಳಿದರು. ಜಿಲ್ಲೆಯ ನಗರಗಳನ್ನು ಸ್ವಚ್ಛವಾಗಿ ಇಡುವುದು ಮುಖ್ಯವಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿನ ವ್ಯವಸ್ಥೆ ಸರಿಯಾಗಿಲ್ಲ. ಬೆರಳಣಿಕೆಯಷ್ಟು ಆಸ್ಪತ್ರೆಗಳು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆ. ಬಡ ಜನರಿಗೆ ಉಚಿತ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವಂತಹ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಹೆಚ್ಚಿನ ಸಂಖ್ಯೆಯಲ್ಲಿ ಶೋಚನೀಯವಾಗಿರುವುದು ಕಳವಳಕಾರಿಯಾಗಿದೆ ಎಂದರು.

ಬಿಟಿಡಿಎ: ದೂರು ನೀಡಿ

ಸಂತ್ರಸ್ತರಲ್ಲದವರಿಗೆ ನಿವೇಶನ ನೀಡಿರುವುದು ಸಂತ್ರಸ್ತರಿಗೆ ನಿವೇಶನ ನೀಡಿಲ್ಲ ಎನ್ನುವುದಾದರೆ ಈ ಬಗ್ಗೆ ದೂರು ನೀಡಬಹುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಹೇಳಿದರು. ಬಿಟಿಡಿಎ ಸಂತ್ರಸ್ತರ ಸಮಸ್ಯೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ಫಾರ್ಮ್ 1 2 ನಲ್ಲಿ ದೂರು ಸಲ್ಲಿಸಿದರೆ ತನಿಖೆಗೆ ಆದೇಶ ಮಾಡಲಾಗುವುದು ಎಂದರು. ಸಂತ್ರಸ್ತರಲ್ಲದವರಿಗೆ ನಿವೇಶನ ಹಂಚಿಕೆಯಾಗಿರುವುದು ಬಿಟಿಡಿಎ ಅಧಿಕಾರಿಗಳ ಗಮನಕ್ಕೆ ಬಂದಿದೆ. ಅದನ್ನು ವಾಪಸ್ ಪಡೆಯುವ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿದೆ ಎಂದರು. ‘ಕೆಲವು ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಪ್ರಮಾಣಪತ್ರಗಳನ್ನು ನನ್ನಿಂದ ಕೊಡಿಸಲು ಯೋಜಿಸಿದ್ದರು. ಪರಿಶೀಲಿಸಿದಾಗ ಸಂತ್ರಸ್ತರಲ್ಲದವರು ಸೇರಿಕೊಂಡಿರುವುದು ಗೊತ್ತಾಯಿತು. ಆರ್ಟಿಸಿಯಲ್ಲೂ ಅವರ ಹೆಸರಿದೆ. ಅದನ್ನು ರದ್ದುಪಡಿಸಿ ಸಂತ್ರಸ್ತರಿಗೆ ನೀಡಬೇಕಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.