ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ

Published 14 ಜೂನ್ 2024, 16:31 IST
Last Updated 14 ಜೂನ್ 2024, 16:31 IST
ಅಕ್ಷರ ಗಾತ್ರ

ಬಾಗಲಕೋಟೆ: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಿಂದ 10ನೇ ತರಗತಿ ವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎ.ಟಿ.ಎಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ (http://swdservices.karnataka..kar.in) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 31. ಅರ್ಜಿ ಸಲ್ಲಿಸಿದ ನಂತರ ಶಾಲಾ ಮುಖ್ಯ ಶಿಕ್ಷಕರಿಂದ ದೃಢೀಕರಿಸಿದ ಎಸ್ಎಟಿಎಸ್ಐಡಿ, ಪೋಷಕರ ಆಧಾರ್‌ ಕಾರ್ಡ್‌, ವಿದ್ಯಾರ್ಥಿಯ ಜಾತಿ, ಆದಾಯ ಪ್ರಮಾಣ ಪತ್ರ, ಒಂದು ಭಾವಚಿತ್ರ, ಹಿಂದಿನ ತರಗತಿಯ ಪಾಸಾದ ಅಂಕಪಟ್ಟಿಗಳನ್ನು ಜೂನ್ 30 ರೊಳಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08354-221821 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT