ಬಾಗಲಕೋಟೆ: ನೆರೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಮುಧೋಳದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರ ಐವರು ಮುಖಂಡರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪ್ರವಾಹದ ವೇಳೆ ಬಿದ್ದ ಮನೆಗಳನ್ನು ಮರು ಸಮೀಕ್ಷೆ ಮಾಡಿ ನೈಜ ಫಲಾನುಭವಿಗಳನ್ನು ಗುರುತಿಸಿ ಅವರ ಹೆಸರು ಸೇರಿಸಬೇಕಿತ್ತು. ಆದರೆ ಕಂಪ್ಯೂಟರ್ಗಳಲ್ಲಿ ನೆರೆ ಪರಿಹಾರಕ್ಕೆ ಸಂಬಂಧಿಸಿದ ಲಾಗಿನ್ ಈಗ ನಿರ್ಬಂಧಿಸಲಾಗಿದೆ. ಇದನ್ನು ಸರಿಪಡಿಸುವಂತೆ ಒತ್ತಾಯಿಸಿ ಸಂತ್ರಸ್ತರು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಪ್ರವಾಸಿಮಂದಿರದಲ್ಲಿ ಮನವಿ ನೀಡಿದರು.

ತಮ್ಮ ಬೇಡಿಕೆಯನ್ನು ತಕ್ಷಣ ಈಡೇರಿಸುವಂತೆ ಪ್ರತಿಭಟನಾಕಾರರು ಹಟ ಹಿಡಿದರು. ಸರಿಯಾಗಿ ಸ್ಪಂದಿಸಲಿಲ್ಲ ಎಂದು ಆರೋಪಿಸಿಸಾಮಾಜಿಕ ಕಾರ್ಯಕರ್ತ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ಕಾರಜೋಳ ಅವರ ಮನೆಯತ್ತ ತೆರಳಿದರು. ಅಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ, ತಳ್ಳಾಟ ನಡೆದಿದೆ. ನಂತರ ಯಲ್ಲಪ್ಪ ಹೆಗಡೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.