ಬುಧವಾರ, ಅಕ್ಟೋಬರ್ 28, 2020
20 °C
ಕಾಂಗ್ರೆಸ್ ಹಿಂದುಳಿದ ವರ್ಗದವರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾಶಿನಾಥ ಹುಡೇದ ಅಧಿಕಾರ ಸ್ವೀಕಾರ

ಹಿಂದುಳಿದವರು ಕಾಂಗ್ರೆಸ್‌ನ ಬೆನ್ನೆಲುಬು: ಎಸ್.ಆರ್. ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಹಿಂದುಳಿದ ವರ್ಗಗಳ ಜನರು ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಈ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೂ ಅಪಾರವಾಗಿದೆ. ರಾಜ್ಯದಲ್ಲಿ ಐದು ಜನ ಪಕ್ಷದ ನಾಯ ಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷ ಕಾಶಿನಾಥ ಹುಡೇದ, ಹಿಂದಿನ ಅಧ್ಯಕ್ಷ ಡಾ.ದೇವರಾಜ ಪಾಟೀಲ, ಕೆಪಿಸಿಸಿ ಕಾರ್ಯದರ್ಶಿ ದಯಾನಂದ ಪಾಟೀಲ ಮಾತನಾಡಿದರು.

ಮಾಜಿ ಸಚಿವರಾದ ಎಚ್.ವೈ. ಮೇಟಿ, ಅಜಯಕುಮಾರ ಸರನಾಯಕ, ಮಾಜಿ ಶಾಸಕ ಜೆ.ಟಿ. ಪಾಟೀಲ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ ವಾಸನದ, ಸೇವಾದಳ ಘಟಕದ ಅಧ್ಯಕ್ಷ ಎನ್.ಬಿ. ಗಸ್ತಿ, ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು