ಶುಕ್ರವಾರ, ಜುಲೈ 23, 2021
23 °C

‘ಮೀನುಗಾರಿಕೆ: ಸವಳು–ಜವಳು ಭೂಮಿ ಬಳಕೆಗೆ ನಿರ್ಧಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: 'ರಾಜ್ಯದಲ್ಲಿ ಕೃಷಿಗೆ ಉಪಯುಕ್ತವಲ್ಲದ ಸವಳು–ಜವಳು ಭೂಮಿಯನ್ನು ಮೀನುಗಾರಿಕೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಹೀಗೆ ಲಭ್ಯವಿರುವ ಜಮೀನಿನ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‘ ಎಂದು ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಹೀಗೆ ಗುರುತಿಸಿದ ಸವಳು–ಜವಳು ಭೂಮಿಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ರೂಪಿಸಲಾಗುತ್ತದೆ. ಆ ಬಗ್ಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಬುಧವಾರ ಇಲ್ಲಿ ತಿಳಿಸಿದರು.

ರೈತರಿಗೆ ಸಿಗುವ ಸವಲತ್ತುಗಳು ಮೀನುಗಾರರಿಗೂ ಸಿಗುವಂತಾಗಲು ಕೇಂದ್ರ ಸರ್ಕಾರ ಕಿಸಾನ್‌ ಕ್ರೆಡಿಟ್ ಕಾರ್ಡ್ ನೀಡುತ್ತಿದೆ. ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 200 ಕಾರ್ಡ್ ವಿತರಿಸುವ ಗುರಿ ಹೊಂದಲಾಗಿದೆ. ಕಾರ್ಡ್ ಹೊಂದಿದ ಮೀನುಗಾರರಿಗೆ ಶೂನ್ಯ ಬಡ್ಡಿ ದರದಲ್ಲಿ ₹3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ ಎಂದರು.

ಕಿಸಾನ್ ಕಾರ್ಡ್‌ಗಾಗಿ ಸಲ್ಲಿಸಿದ ಅರ್ಜಿಯನ್ನು ಒಂದು ತಿಂಗಳೊಳಗಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.