ಬಾದಾಮಿ: ‘ಪೌರಕಾರ್ಮಿಕರಿಗೆ ಸ್ವಂತ ನಿವೇಶನವಿದ್ದರೆ ಸೂರು ನಿರ್ಮಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನ ಕೊಡುತ್ತಿದೆ. ಅನುದಾನದ ಸದುಪಯೋಗವನ್ನು ಪಡೆದುಕೊಳ್ಳಿ’ ಎಂದು ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಹೇಳಿದರು.

ಇಲ್ಲಿನ ಪುರಸಭೆ ಸಭಾ ಭವನದಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆ ಸಮಾರಂಭಕ್ಕೆ ಚಾಲನೆ ನೀಡಿ, ಕಾರ್ಮಿಕರನ್ನು ಸನ್ಮಾನಿಸಿ ಮಾತನಾಡಿದರು.

‘ಐತಿಹಾಸಿಕ ಪಟ್ಟಣವನ್ನು ನಿತ್ಯ ಸ್ವಚ್ಛ ಮಾಡುವ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ. ಸಾರ್ವಜನಿಕರು ಪೌರ ಕಾರ್ಮಿಕರನ್ನು ಗೌರವದಿಂದ ಕಾಣಬೇಕು’ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಮಂಜುನಾಥ ಹೊಸಮನಿ, ‘ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು’ ಎಂದು ಸಲಹೆ ನೀಡಿದರು.

ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಧರ್ಮಣ್ಣ ಚಲವಾದಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

ಪುರಸಭೆ ಸದಸ್ಯರು, ಮುಖ್ಯಾಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.