ಬಾದಾಮಿ: ‘ಭಾರತೀಯ ಜನತಾ ಪಕ್ಷವನ್ನು ಕಾರ್ಯಕರ್ತರು ಬೂತ್ ಮಟ್ಟ, ಶಕ್ತಿ ಮತ್ತು ಮಹಾಶಕ್ತಿ ಮಟ್ಟದಲ್ಲಿ ಗಟ್ಟಿಗೊಳಿಸಿ. ಪಕ್ಷದಲ್ಲಿನ ಶಿಸ್ತು ಮತ್ತು ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳಿವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್.ರವಿ ಕುಮಾರ ಹೇಳಿದರು.

ಮಹಾಕೂಟದಲ್ಲಿ ಸೋಮವಾರ ನಡೆದ ಪಂ.ದೀನದಯಾಳ್ ಉಪಾ ಧ್ಯಾಯ ಪ್ರಶಿಕ್ಷಣ ಅಭಿಯಾನದ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಕ್ಷದ ಸಂಘಟನೆಯಲ್ಲಿ ತೊಡಗಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಗೌರವ ವಿದೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮನೆಗೆಲಸ ಮಾಡುವ ಮಹಿಳೆಯೊಬ್ಬರು ಶಾಸಕರಾಗಿ ಆಯ್ಕೆಯಾಗಿರುವುದನ್ನು ನೆನಪಿಸಿದರು.

ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಕುರಿತು ಬಾಗಲ ಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕರಾದ ಸಿದ್ದು ಸವದಿ, ಶಶಿಕಲಾ ಜೊಲ್ಲೆ, ಮಾಜಿ ಶಾಸಕರಾದ ರಾಜಶೇಖರ್ ಶೀಲವಂತರ, ಎಂ.ಕೆ.ಪಟ್ಟಣಶೆಟ್ಟಿ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ ಮಾತನಾಡಿದರು.

ಮುಖಂಡಾದ ರಾಜು ನಾಯ್ಕರ್, ರಾಜು ಮುದೇನೂರ, ಸಿ.ಟಿ.ಉಪಾ ಧ್ಯಾಯ, ಭಾಗ್ಯ ಉದ್ನೂರ, ಮಲ್ಲಯ್ಯ ಮೂಗನೂರಮಠ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರು ಪ್ರಶಿಕ್ಷಣ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-19-1094483812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.