ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾದಾಮಿ, ಐಹೊಳೆ, ಪಟ್ಟದಕಲ್ಲು ಸ್ಮಾರಕಗಳು ಬಂದ್

ಮಾರ್ಚ್ 22ರವರೆಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಿ ಜಿಲ್ಲಾಡಳಿತದ ಆದೇಶ
Last Updated 15 ಮಾರ್ಚ್ 2020, 13:10 IST
ಅಕ್ಷರ ಗಾತ್ರ
ADVERTISEMENT
""

ಬಾಗಲಕೋಟೆ: ಕೊರೊನಾ ವೈರಸ್ ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಮಾರ್ಚ್ 15ರಿಂದ 22ರವರೆಗೆ ಒಂದು ವಾರ ಕಾಲ ಇಲ್ಲಿನ ಬಾದಾಮಿ, ಐಹೊಳೆ, ಪಟ್ಟದಕಲ್ಲಿನ ಪುರಾತತ್ವ ಸ್ಮಾರಕಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಭಾರತೀಯ ಪುರಾತತ್ವ ಇಲಾಖೆ ವ್ಯಾಪ್ತಿಯ ಈ ಸ್ಮಾರಕಗಳಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ದೇಶ–ವಿದೇಶದ ಪ್ರವಾಸಿಗರು ಬರುತ್ತಾರೆ. ಹೀಗಾಗಿ ಕೊರೊನಾ ವೈರಸ್ ಹರಡುವಿಕೆ ಸಾಧ್ಯತೆ ಹೆಚ್ಚಿರುವ ಕಾರಣ ಸ್ಮಾರಕಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಐಹೊಳೆ

ಈ ಆದೇಶ ಮಾರ್ಚ್ 15ರ ಮುಂಜಾನೆ 6 ಗಂಟೆಯಿಂದಲೇ ಅನ್ವಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

’ನನಗೆ ತಿಳಿವಳಿಕೆ ಬಂದಂತೆ ಇದೇ ಮೊದಲ ಬಾರಿಗೆ ಚಾಲುಕ್ಯರ ಸ್ಮಾರಕಗಳಿಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಇದೊಂದು ವಿಶೇಷ ಸಂದರ್ಭ. ಅನಿವಾರ್ಯವೂ ಹೌದು ಎಂದು ನಿವೃತ್ತ ಉಪನ್ಯಾಸಕರೂ ಆದ ಬಾದಾಮಿಯ ಇತಿಹಾಸ ತಜ್ಞ ಡಾ.ಶಿಲಾಕಾಂತ ಪತ್ತಾರ ’ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT