ಬಾದಾಮಿ: ಬನಶಂಕರಿದೇವಿ ಕ್ಷೇತ್ರದಲ್ಲಿ ಮೇ.8, 9 ರಂದು ಅಖಿಲ ಭಾರತ ದೇವಾಂಗ ಜಾಗೃತಿ ಸಮಾವೇಶ ಮತ್ತು ದಯಾನಂದ ಪುರಿ ಶ್ರೀಗಳ 36ನೇ ಪಟ್ಟಾಭಿಷೇಕ ಮಹೋತ್ಸವ, ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ದೇವಾಂಗ ಸಮಾಜದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಹೇಳಿದರು.

ಅಖಿಲ ಭಾರತ ದೇವಾಂಗ (ನೇಕಾರ) ಜಾಗೃತಿ ಸಮಾವೇಶ ಸಮಿತಿ ಆಶ್ರಯದಲ್ಲಿ ಮೇ 8 ರಂದು ಬೆಳಿಗ್ಗೆ 6 ಗಂಟೆಗೆ ಬನಶಂಕರಿಯಲ್ಲಿ ಚೌಡೇಶ್ವರಿ ದೇವಿಯ ಕತ್ತಿ ಹಬ್ಬಕ್ಕೆ ಸಂಸದ ಪಿ.ಸಿ. ಗದ್ದಿಗೌಡರ ಮತ್ತು ಶಾಸಕ ಭೀಮಸೇನ ಚಿಮ್ಮನಕಟ್ಟಿ ಚಾಲನೆ ನೀಡುವರು ಎಂದು ಮಂಗಳವಾರ ಅವರು ಸಮಾವೇಶದ ಪರಿಕರಗಳಿಗೆ ಚಾಲನೆ ನೀಡಿ ಪತ್ರಕರ್ತರಿಗೆ ಸಮಾವೇಶದ ವಿವರಣೆ ನೀಡಿದರು.

ಮಧ್ಯಾಹ್ನ 12 ಕ್ಕೆ ನಡೆಯುವ ಸಮಾರಂಭಕ್ಕೆ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ, ಶಂಕರ ಶಿವಾಚಾರ್ಯ ಸ್ವಾಮೀಜಿ, ಪ್ರಭುಲಿಂಗ ಸ್ವಾಮೀಜಿ, ಅಭಿನವ ರೇವಣಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಮಾರಂಭಕ್ಕೆ ಚಾಲನೆ ನೀಡುವರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೇವರ ದಾಸಿಮಯ್ಯ ಇಂಗ್ಲಿಷ್ ವಚನಗಳ ಕೃತಿ ಬಿಡುಗಡೆ ಮಾಡುವರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದಾಸೋಹ ಭವನವನ್ನು ಉದ್ಘಾಟಿಸುವರು.

ಸಂಸದರಾದ ಜಗದೀಶ ಶೆಟ್ಟರ ಮತ್ತು ಬಸವರಾಜ ಬೊಮ್ಮಾಯಿ ದಾನಿಗಳಿಗೆ ಸನ್ಮಾನಿಸುವರು. ರಾಜ್ಯ ಸಭಾ ಸದಸ್ಯ ಕೆ. ನಾರಾಯಣ ಅಧ್ಯಕ್ಷತೆ ವಹಿಸುವರು.

ಮೇ 9ರಂದು ಬೆಳಿಗ್ಗೆ 9 ಕ್ಕೆ ಕುಂಭ ಮೆರವಣಿಗೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಚಾಲನೆ ನೀಡುವರು. ಬೆಳಿಗ್ಗೆ 10 ಕ್ಕೆ ನಡೆಯುವ ಸಮಾರಂಭಕ್ಕೆ ನಿರ್ಮಲಾನಂದ ಸ್ವಾಮೀಜಿ, ಪುರುಷೋತ್ತಮಾನಂದಪುರಿ ಸ್ವಾಮೀಜಿ ಮತ್ತು ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭ ಉದ್ಘಾಟಿಸಿ ದಯಾನಂದಪುರಿ ಶ್ರೀಗಳಿಗೆ ತುಲಾಭಾರ ನೆರವೇರಿಸುವರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅತಿಥಿ ಗೃಹಗಳ ಶಂಕುಸ್ಥಾಪನೆ, ಪ್ರವಾಸೋದ್ಯಮ ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಸ್ಮರಣ ಸಂಚಿಕೆ ಬಿಡುಗಡೆ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸಚಿವ ಎನ್.ಎಸ್. ಭೋಸರಾಜು ದಾನಿಗಳಿಗೆ ಸನ್ಮಾನಿಸುವರು. ಸಚಿವರಾದ ಮಧು ಬಂಗಾರಪ್ಪ, ಶಿವಾನಂದ ಪಾಟೀಲ, ಶಿವರಾಜ ತಂಗಡಗಿ ಆಗಮಿಸುವರು ಎಂದು ಹೇಳಿದರು.

ದೇವಾಂಗ ಸಮಾಜದ ಗಣ್ಯರಾದ ಟಿ. ರಾಜೇಶ್, ಸಂಕಣ್ಣ ಕರಡಿಗುಡ್ಡ, ಪೀತಾಂಬ್ರಪ್ಪ ಹವೇಲಿ, ಬಸವರಾಜ ಕುದರಿ, ವಿಜಯಕುಮಾರ ಬಾಪರಿ, ಪ್ರಕಾಶ ಪಟ್ಟದಕಲ್ಲ, ಉಮೇಶ ಕಂದಗಲ್, ಮಹೇಶ ಶೇಬನಕಟ್ಟಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-19-1303460928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.