ಬಾದಾಮಿ: ‘ಪಟ್ಟಣದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅನಧಿಕೃತ ವ್ಯಕ್ತಿಗಳು ಬಂದು ವೈದ್ಯರಿಗೆ ಮತ್ತು ರೋಗಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ’ ಎಂದು ವೈದ್ಯರು ತಹಶೀಲ್ದಾರ್ಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತಾಲ್ಲೂಕು ಮಟ್ಟದ ಭಾರತೀಯ ವೈದ್ಯ ಸಂಘದಿಂದ ಗುರುವಾರ ಸರ್ಕಾರಿ ಮತ್ತು ಖಾಸಗಿ ವೈದ್ಯರು, ಔಷಧ ವರ್ತಕ ಸಂಘ ಮತ್ತು ಆಸ್ಪತ್ರೆ ಸಿಬ್ಬಂದಿ ಮನವಿ ಸಲ್ಲಿಸಿದರು.

ಅನಧಿಕೃತ ವ್ಯಕ್ತಿಗಳು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಬಂದು ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸುವರು. ವೈದ್ಯರ ಮತ್ತು ರೋಗಿಗಳ ಫೋಟೊ ತೆಗೆಯುವುದು ಮತ್ತು ವಿಡೀಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವರು. ಇದರಿಂದ ವೈದ್ಯರಿಗೆ ಮಾನಸಿಕ ಹಿಂಸೆಯಾಗುತ್ತಿದೆ. ವೈದ್ಯರು ರೋಗಿಗಳಿಗೆ ಉತ್ತಮ ಸೇವೆಯನ್ನು ಕೊಡಲು ಆಗುವುದಿಲ್ಲ ಮನವಿಯಲ್ಲಿ ತಿಳಿಸಿದ್ದಾರೆ.

ಅನಪೇಕ್ಷಿತ ವ್ಯಕ್ತಿಗಳಿಂದ ಫೋಟೊ ತೆಗೆಯುವುದು ಮತ್ತು ವೀಡಿಯೊ ಮಾಡುವುದು ಮುಂದುವರಿದಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ತಾಲ್ಲೂಕಿನ ಎಲ್ಲ ಆಸ್ಪತ್ರೆ ಮತ್ತು ಕ್ಲಿನಿಕ್ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ಅನಿರ್ಧಿಷ್ಟಾವಧಿ ಧರಣಿ ಕೂಡುವುದಾಗಿ ತಿಳಿಸಿದ್ದಾರೆ.

ತಾಲ್ಲೂಕು ಘಟಕದ ಐಎಂಎ ಅಧ್ಯಕ್ಷ ಡಾ.ಆರ್.ಸಿ. ಭಂಡಾರಿ, ಡಾ. ಚಂದ್ರಶೇಖರ ನೀರಲಗಿ, ಕಾರ್ಯದರ್ಶಿ ಡಾ. ಶ್ರೀಧರ ದುಗುಲದ, ಔಷಧಿ ವರ್ತಕರ ಸಂಘದ ಅಧ್ಯಕ್ಷ ಶ್ರೀಧರ ಫತ್ತೇಪೂರ, ಐಎಂಐ ಮತ್ತು ಎಫ್ಐ ಸದಸ್ಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-19-299487612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.