ಬಾದಾಮಿ: ‘ಗ್ರಾಮಗಳ ಅಭ್ಯುದಯವೇ ರಾಷ್ಟ್ರದ ಅಭಿವೃದ್ಧಿ ಎಂಬುದು ಮಹಾತ್ಮ ಗಾಂಧೀಜಿಯವರ ನಿಲುವಾಗಿತ್ತು. ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತಾಲ್ಲೂಕು ಪಂಚಾಯಿತಿ ಪ್ರಥಮ ಸ್ಥಾನ ಪಡೆದಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಸತೀಶ ಮಾಕೊಂಡ ತಿಳಿಸಿದ್ದಾರೆ.

ತಾಲ್ಲೂಕಿನ 30 ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ, ಬಡಜನರಿಗೆ ಸೂರು, ಸಕಾಲಕ್ಕೆ ಆದ್ಯತೆ, 15ನೇ ಹಣಹಾಸು ಆಯೋಗದ ಅನುದಾನ ಸದ್ಬಳಕೆ, ಬಾಪೂಜಿ ಸೇವಾ ಕೇಂದ್ರ, ಸ್ವಚ್ಛ ಭಾರತ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2025-26ನೇ ಸಾಲಿನಲ್ಲಿ ಬಾದಾಮಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಂದ ₹3,74,59,530 ತೆರಿಗೆ ಸಂಗ್ರಹದ ಗುರಿ ಇತ್ತು. ಗುರಿ ಮೀರಿ ₹4,62,49,486 ತೆರಿಗೆ ಸಂಗ್ರಹಿಸಿ ಶೇ 123.5 ಪ್ರಗತಿ ಸಾಧಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಗ್ರಾಮೀಣ ಬಡಜನರಿಗೆ, ವಸತಿ ರಹಿತರಿಗೆ, ಕಚ್ಚಾ ಮನೆಯಲ್ಲಿ ವಾಸಿಸುವವರಿಗೆ ಶಾಶ್ವತ ಮನೆ ನಿರ್ಮಾಣಕ್ಕೆ ಕೇಂದ್ರದ ಪಿಎಂ ವಸತಿ ಯೋಜನೆ, ರಾಜ್ಯದ ಬಸವ-ಅಂಬೇಡ್ಕರ್ ಯೋಜನೆಯಲ್ಲಿ ಆರ್ಥಿಕ ನೆರವನ್ನು ಕೊಡಲಾಗಿದೆ. ಪಿಎಂ ಯೋಜನೆಯಲ್ಲಿ 5224 ಫಲಾನುಭವಿಗಳು ಮತ್ತು ಬಸವ-ಅಂಬೇಡ್ಕರ್ ಯೋಜನೆಯಲ್ಲಿ 1500 ಫಲಾನುಭವಿಗಳನ್ನು ಆಯ್ಕೆ ಮಾಡಿ ಮೊದಲ ಸ್ಥಾನವನ್ನು ಪಡೆದಿದೆ.

ನಿಗದಿತ ಅವಧಿಯಲ್ಲಿ ನಾಗರಿಕರಿಗೆ ಸೇವೆಯನ್ನು ಒದಗಿಸಲು ಸರ್ಕಾರವು ಸಕಾಲವನ್ನು ಆರಂಭಿಸಿದೆ. ಆಡಳಿತದಲ್ಲಿ ವೇಗ, ಭ್ರಷ್ಟಾಚಾರಕ್ಕೆ ಕಡಿವಾಣ ಮತ್ತು ಪಾರದರ್ಶಕತೆಯನ್ನು ಹೊಂದಲು ‘ಸಕಾಲ’ ಜಾರಿಯಾಗಿದೆ. ಆರ್ಥಿಕ ವರ್ಷದಲ್ಲಿ ಸಾರ್ವಜನಿಕರಿಂದ 2872 ಅರ್ಜಿಗಳು ಬಂದಿದ್ದವು. ನಿಗದಿತ ಅವಧಿಯೊಳಗೆ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಶೇ 100 ಸಾಧನೆ ಮಾಡಿದೆ.

ಗ್ರಾಮ ಪಂಚಾಯಿತಿಯಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರಿಗೆ ವಿವಿಧ ದಾಖಲೆಗಳನ್ನು ಪೂರೈಸುವುದರ ಮೂಲಕ ಸೇವಾ ಕೇಂದ್ರದಿಂದ ₹25.78 ಲಕ್ಷ ಸಂಗ್ರಹಿಸಲಾಗಿದೆ.

ಸ್ವಚ್ಛ ಭಾರತ ಮಿಷನ್ ಯೋಜನೆಯಲ್ಲಿ ಗ್ರಾಮೀಣ ಕುಟುಂಬಕ್ಕೆ ಶೌಚಾಲಯ ನಿರ್ಮಿಸಲು ಪ್ರೋತ್ಸಾಹ ಕೊಡಲಾಗುತ್ತಿದೆ. ಹಳ್ಳಿಗಳಲ್ಲಿ ಶೇ 80.93 ಶೌಚಾಲಯಗಳನ್ನು ನಿರ್ಮಿಸಲಾಗಿದೆ.

‘ಸರ್ಕಾರದ ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಅವಿರತವಾಗಿ ಶ್ರಮಿಸಿ ಉತ್ತಮ ಸಾಧನೆ ಮಾಡಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಇಒ ಶಶಿಧರ ಕುರೇರ ಮತ್ತು ಉಪಕಾರ್ಯದರ್ಶಿ ಎನ್.ವೈ ಬಸರಿಗಿಡದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-19-1072438031

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.