ಬಾದಾಮಿ: ಐತಿಹಾಸಿಕ ಪಟ್ಟಣದ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಸಾಲು ಮರಗಳಿಗೆ ಫ್ಲೆಕ್ಸ್ ಮತ್ತು ಬ್ಯಾನರ್ ಕಟ್ಟಿ ಗಿಡಗಳು ಬೆಳೆಯುವುದಕ್ಕೆ ಅಡ್ಡಿ ಮಾಡಿದ್ದಾರೆ ಹಾಗೂ ಅಂದ ಹಾಳು ಮಾಡುತ್ತಿದ್ದಾರೆ ಎಂದು ಪರಿಸರ ಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಅರಣ್ಯ ಇಲಾಖೆ ಅಂದಾಜು 8 ವರ್ಷಗಳ ಹಿಂದೆ ಸಾಲು ಮರಗಳನ್ನು ನೆಟ್ಟಿದೆ. ಈ ಮರಗಳಿಗೆ ಶಾಲಾ ಕಾಲೇಜುಗಳು ಮತ್ತು ಖಾಸಗಿ ವ್ಯಕ್ತಿಗಳು ಲೈಟ್ ಹಾಕುವುದು, ಫ್ಲೆಕ್ಸ್ ಮತ್ತು ಬ್ಯಾನರ್ ಕಟ್ಟಿ ಮರಗಳ ಅಂದವನ್ನು ಹಾಳು ಮಾಡುತ್ತಿದ್ದಾರೆ.

‘ಖಾಸಗಿ ವ್ಯಕ್ತಿಗಳು ಫ್ಲೆಕ್ಸ್, ಬ್ಯಾನರ್ ಕಟ್ಟಲು ತಂತಿ ಮತ್ತು ಮೊಳೆಯನ್ನು ಮರಕ್ಕೆ ಬಡಿದು, ಸುತ್ತಿ ಚಿಕ್ಕ ಮರಗಳನ್ನು ಹಾಳು ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ನಿಸರ್ಗ ಬಳಗದ ಅಧ್ಯಕ್ಷ ಎಸ್.ಎಚ್. ವಾಸನ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-19-652218954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.