ಬಾದಾಮಿ: ‘ಪಟ್ಟಣದ ವೀರಪುಲಿಕೇಶಿ ಕೊ-ಆಪರೇಟಿವ್ ಬ್ಯಾಂಕಿನ ಪ್ರಧಾನ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಮೇ 14ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ’ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಕೆ. ಪಟ್ಟಣಶೆಟ್ಟಿ ಹೇಳಿದರು.

‘ಈಗಿರುವ ಪ್ರಧಾನ ಕಚೇರಿ ಕಟ್ಟಡ ಚಿಕ್ಕದಾಗಿದ್ದು ಗ್ರಾಹಕರಿಗೆ ತೊಂದರೆಯಾಗಿದೆ. ವೀರಪುಲಿಕೇಶಿ ವಿದ್ಯಾಸಂಸ್ಥೆಯ ಆವರಣದ ನಿವೇಶನದಲ್ಲಿ ₹ 2 ಕೋಟಿ ವೆಚ್ಚದಲ್ಲಿ ನೂತನ ಬ್ಯಾಂಕ್ ಕಟ್ಟಡ ನಿರ್ಮಾಣ ಮಾಡಲಾಗಿದೆ’ ಎಂದರು.

ಪ್ರಧಾನ ಕಚೇರಿ ಬ್ಯಾಂಕಿನಲ್ಲಿ 18,448 ಸದಸ್ಯರಿದ್ದಾರೆ. ನಿಧಿಗಳು ₹75.66 ಕೋಟಿ, ಠೇವುಗಳು₹455 ಕೋಟಿ, ಸಾಲಗಳು ₹ 263 ಕೋಟಿ ಹಾಗೂ ದುಡಿಯುವ ಬಂಡವಾಳ ₹ 553 ಕೋಟಿಯಾಗಿದೆ ಎಂದು ತಿಳಿಸಿದರು.

‘ ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ವೀರಪುಲಿಕೇಶಿ ಸಹಕಾರ ಬ್ಯಾಂಕ್ 14 ಶಾಖೆಗಳನ್ನು ಹೊಂದಿದೆ. ಬ್ಯಾಂಕಿನ ವ್ಯವಹಾರವನ್ನು ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಸಾವಿರಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೀಡಲಾಗಿದೆ ’ ಎಂದು ತಿಳಿಸಿದರು.

ಮನೆ ನಿರ್ಮಾಣ, ವಾಹನ ಖರೀದಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯಗಳನ್ನು ಕೊಡಲಾಗಿದೆ. ನಿರ್ದೇಶಕ ಮಂಡಳಿ, ಸಿಬ್ಬಂದಿ ಮತ್ತು ಗ್ರಾಹಕರ ಸಹಕಾರದಿಂದ ಸಹಕಾರ ಬ್ಯಾಂಕ್ ಪ್ರಗತಿಯಲ್ಲಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-19-1101751434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.