ಶನಿವಾರ, ಜುಲೈ 24, 2021
27 °C
ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ 96ಕ್ಕೆ ಏರಿಕೆ

ಬಾಗಲಕೋಟೆ: 2 ವರ್ಷದ ಮಗು ಸೇರಿದಂತೆ ಇಬ್ಬರಿಗೆ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಇಲ್ಲಿನ ನವನಗರದಲ್ಲಿ ಎರಡು ವರ್ಷದ ಹೆಣ್ಣು ಮಗು ಸೇರಿದಂತೆ ಇಬ್ಬರಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ.

ಹೆಣ್ಣು ಮಗು (ಪಿ-5966) ಹಾಗೂ 26 ವರ್ಷದ ಮಹಿಳೆಗೆ (ಪಿ-5967) ಕೋವಿಡ್–19 ಸೋಂಕು ದೃಢಪಟ್ಟಿದೆ. ಸೋಂಕಿತರು ಮಹಾರಾಷ್ಟ್ರ ರಾಜ್ಯದಿಂದ ಮರಳಿದ್ದಾರೆ. ಅಲ್ಲಿಯ ನಂಟಿನಿಂದ ಸೋಂಕು ತಗುಲಿದೆ. ಜಿಲ್ಲೆಗೆ ಬಂದ ಅವರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಸ್ಯಾಂಪಲ್‌ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಪಾಸಿಟಿವ್ ಬಂದಿದೆ. ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು