ಬಾದಾಮಿ: ‘ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಮನೆ ಮನೆಗೆ ತೆರಳಿ ಜನರ ಮನವೊಲಿಸಿ ತಾಡೋಲೆಗಳನ್ನು ಸಂಗ್ರಹಿಸಿದರು. ಒಟ್ಟು 249 ಶರಣರ ವಚನಗಳನ್ನು ಸಂಗ್ರಹಿಸಿ ವಚನ ಸಾಹಿತ್ಯವನ್ನು ಲೋಕಾರ್ಪಣೆ ಮಾಡಿದ್ದಾರೆ ’ ಎಂದು ಸಾಹಿತಿ ಡಾ.ಚನ್ನಪ್ಪ ಕಟ್ಟಿ ಹೇಳಿದರು.
ಇಲ್ಲಿನ ವೀರಪುಲಿಕೇಶಿ ವಿದ್ಯಾಸಂಸ್ಥೆಯ ಅಟಲ್ ಟಿಂಕರಿಂಗ್ ಭವನದಲ್ಲಿ ಭಾನುವಾರ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಜಯಂತಿ ಉತ್ಸವ ಮತ್ತು ಲೇಖಕಿ ಕಸ್ತೂರಿ ಬಾಯರಿ ಸ್ಮರಣೆಯ ದತ್ತಿ ಉಪನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು.
ನಿವೃತ್ತ ಮುಖ್ಯ ಶಿಕ್ಷಕ ಎಸ್.ಎಂ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಘಟಕದ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷೆ ಉಮಾದೇವಿ ಪಟ್ಟಣಶೆಟ್ಟಿ, ರೋಹಿಣಿ ಬಾಯರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.