ಬಾಗಲಕೋಟೆ: ಕಳೆದ ನಾಲ್ಕು ಚುನಾವಣೆಗಳಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವೀರಶೈವ ಲಿಂಗಾಯತ ಸಮುದಾಯದ ಮತ್ತು ಕಾಂಗ್ರೆಸ್ನಿಂದ ಕುರುಬ ಸಮುದಾಯದ ಅಭ್ಯರ್ಥಿ ಸ್ಪರ್ಧಿಸಿದ್ದಾರೆ. ಕುರುಬ ಸಮುದಾಯದ ಮತಗಳ ಸೆಳೆಯಲು ಬಿಜೆಪಿ, ಲಿಂಗಾಯತ ಮತಗಳ ಸೆಳೆಯಲು ಕಾಂಗ್ರೆಸ್ ತಂತ್ರ ಹೆಣೆಯುತ್ತಿವೆ.

ಬಿಜೆಪಿಯು ಕುರುಬ ಸಮುದಾಯದ ಮತಗಳನ್ನು ಸೆಳೆಯಲು ಆ ಸಮುದಾಯದ ನಾಯಕರನ್ನು ಸೆಳೆದುಕೊಳ್ಳುತ್ತಿದ್ದರೆ, ಕಾಂಗ್ರೆಸ್ ಪಕ್ಷವು ಲಿಂಗಾಯತ ಮತಗಳನ್ನು ಸೆಳೆಯಲು ಪಕ್ಷದೊಳಗಿರುವ ಲಿಂಗಾಯತ ನಾಯಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದೆ.

‘ಕಾಂಗ್ರೆಸ್ ಅಭ್ಯರ್ಥಿ ಕುರುಬ ಸಮುದಾಯದವರೇ ಆಗುತ್ತಿರುವ ಕಾರಣ ಆ ಸಮುದಾಯದ ಮತಗಳು ಬಿಜೆಪಿಗೆ ಹೆಚ್ಚಿನ ಪ್ರಮಾಣದಲ್ಲಿ ಬೀಳುವುದಿಲ್ಲ’ ಎಂಬುದು ಬಿಜೆಪಿ ನಾಯಕರ ಅನಿಸಿಕೆ. ಜೊತೆಗೆ ಕೆ.ಎಸ್.ಈಶ್ವರಪ್ಪ ಅವರೂ ಬಿಜೆಪಿಯಲ್ಲಿ ಇಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಬಲ ನಾಯಕತ್ವ ಇರುವುದರಿಂದ ಕುರುಬರ ಮತ ಸೆಳೆಯುವುದು ಬಿಜೆಪಿಗೆ ಸವಾಲಿನ ಕೆಲಸ.

ಇದನ್ನು ಸರಿಪಡಿಸಿಕೊಳ್ಳಲು ಬಿಜೆಪಿ ನಾಯಕರು ಕುರುಬ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ.ಸಿದ್ದಾಪುರ ಮತ್ತು ಕಳೆದ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ 3,800ಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದ ಕುರುಬ ಸಮುದಾಯದ ಡಾ.ದೇವರಾಜ ಪಾಟೀಲ ಅವರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

‘ಮೊದಲು ಬಿಜೆಪಿಯಲ್ಲಿದ್ದೆ. ಎಚ್.ವೈ.ಮೇಟಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಆರಂಭಿಸಿದ್ದರಿಂದ ಅವರೊಂದಿಗಿನ ಉತ್ತಮ ಬಾಂಧವ್ಯದಿಂದ ರಾಜಕೀಯದಿಂದ ತಟಸ್ಥನಾದೆ. ಈಗ ಮತ್ತೆ ಬಿಜೆಪಿ ಸೇರಿ ಸಕ್ರಿಯನಾಗಿದ್ದೇನೆ’ ಎಂದು ಡಿ.ಬಿ. ಸಿದ್ದಾಪುರ ಹೇಳಿದರು.

ಲಿಂಗಾಯತ ಮತಕ್ಕೆ ಗಾಳ: ನಾಲ್ಕು ಚುನಾವಣೆಗಳಿಂದ ಬಿಜೆಪಿ ಅಭ್ಯರ್ಥಿಯಾಗಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. 2023ರ ಚುನಾವಣೆಯಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್ ನಾಯಕರು ಬಸವೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಅವರನ್ನು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡಿದ್ದರು.

ತಪಶೆಟ್ಟಿ ಅವರು ಸೇರ್ಪಡೆಯಾಗುವಾಗ, ‘ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ‘ದ ಅಧ್ಯಕ್ಷ ಸ್ಥಾನ ಕೊಡುವಂತೆ ಷರತ್ತು ಹಾಕಿದ್ದರಂತೆ. ನಂತರದಲ್ಲಿ ಎಚ್.ವೈ.ಮೇಟಿ ಅವರೇ ಅಧ್ಯಕ್ಷರಾಗಿದ್ದರು. ಉಪಚುನಾವಣೆ ವೇಳೆ ಅವರು ಬಿಜೆಪಿಗೆ ಮರಳುವುದನ್ನು ತಡೆಯಲು ಬಿಟಿಡಿಎ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ.

ಬಿಜೆಪಿಯಿಂದ ಉಚ್ಚಾಟಿಸಿದ್ದಕ್ಕೆ ಕೋಪಗೊಂಡಿದ್ದ ಮಲ್ಲಿಕಾರ್ಜುನ ಚರಂತಿಮಠ ಕಳೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ 10 ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ನಂತರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು. ಮರಳಿ ಬಿಜೆಪಿಗೆ ಸೇರುತ್ತಿರುವುದು ಗೊತ್ತಾಗುತ್ತಿದ್ದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮನೆಗೆ ಭೇಟಿ ನೀಡಿ ಸಮಾಧಾನ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.