ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆ ಬಳಿಕ ಕೋವಿಡ್-19 ನೆಗೆಟಿವ್: ಬಾಗಲಕೋಟೆ ಆಸ್ಪತ್ರೆಯಿಂದ ಇಬ್ಬರ ಬಿಡುಗಡೆ

Last Updated 21 ಏಪ್ರಿಲ್ 2020, 8:00 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಇಬ್ಬರು ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ಮೊದಲ ಬಾರಿಗೆ ಕೋವಿಡ್-19 ಸೋಂಕಿತರಾಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದ 75 ವರ್ಷದ ವೃದ್ಧನ 54 ವರ್ಷದ ಪತ್ನಿ (ರೋಗಿ ಸಂಖ್ಯೆ-161) ಹಾಗೂ 58 ವರ್ಷದ ಸಹೋದರನಿಗೆ (ರೋಗಿ ಸಂಖ್ಯೆ-162) ನಂತರ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಇಬ್ಬರನ್ನೂ ಏಪ್ರಿಲ್ 2ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈಗ ಅವರು ಗುಣಮುಖರಾಗಿದ್ದಾರೆ. ಇಬ್ಬರ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಎರಡು ಬಾರಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಫಲಿತಾಂಶ ನೆಗೆಟಿವ್ ಬಂದಿದೆ. ಹೀಗಾಗಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದರು.

ಆಸ್ಪತ್ರೆಯಿಂದ ಮನೆಗೆ ತೆರಳಿರುವ ಇಬ್ಬರೂ ಇನ್ನೂ 15 ದಿನ ಅಲ್ಲಿಯೂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಈ ಅವಧಿಯಲ್ಲೂ ಅವರ ಮೇಲೆ ನಿಗಾ ಇಡಲಾಗುವುದು ಎಂದರು.

ಬಾಗಲಕೋಟೆಯಲ್ಲಿ ಇಲ್ಲಿಯವರೆಗೆ 21 ಮಂದಿ ಸೋಂಕಿತರ ಪೈಕಿ ಒಬ್ಬರು ಮೃತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT