ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಗ್ರಾಮ ಪಂಚಾಯ್ತಿ ಮೊದಲ ಹಂತದ ಚುನಾವಣೆಗೆ ಸಿದ್ಧತೆ ಪೂರ್ಣ

Last Updated 21 ಡಿಸೆಂಬರ್ 2020, 10:10 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಯ ಮತದಾನ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದೆ. ಜಮಖಂಡಿ ಉಪವಿಭಾಗದ ನಾಲ್ಕು ತಾಲ್ಲೂಕುಗಳ (ಜಮಖಂಡಿ, ಮುಧೋಳ, ರಬಕವಿ-ಬನಹಟ್ಟಿ, ಬೀಳಗಿ) ವ್ಯಾಪ್ತಿಯ 89 ಗ್ರಾಮ ಪಂಚಾಯ್ತಿಗಳ 1397 ಸ್ಥಾನಗಳಿಗೆ ಮಂಗಳವಾರ ಮತದಾನ ನಡೆಯಲಿದೆ. ಒಟ್ಟು 3382 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಚುನಾವಣೆ ಪ್ರಕ್ರಿಯೆಗೆ ಪೂರಕವಾಗಿ ಸೋಮವಾರ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ಚುನಾವಣೆ ಪ್ರಕ್ರಿಯೆಗೆ ನಿಯೋಜನೆಗೊಂಡ ಸಿಬ್ಬಂದಿ ಅಗತ್ಯ ಪರಿಕರಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದರು.

ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 89 ಗ್ರಾಮ ಪಂಚಾಯ್ತಿಗಳ ಒಟ್ಟು 1592 ಸ್ಥಾನಗಳ ಪೈಕಿ 41ಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಖಾಲಿ ಉಳಿದಿವೆ. 154 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 3382 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಇದ್ದಾರೆ.

ಜಮಖಂಡಿ ತಾಲ್ಲೂಕಿನಲ್ಲಿ 1070, ರಬಕವಿ-ಬನಹಟ್ಟಿ 791, ಮುಧೋಳ 819, ಬೀಳಗಿಯಲ್ಲಿ 702 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಬೇರೆ ಬೇರೆ ಕಾರಣಗಳಿಗೆ ಬೀಳಗಿ ತಾಲ್ಲೂಕಿನ ಇನಾಂ ಹಂಚಿನಾಳ, ರೊಳ್ಳಿ ಹಾಗೂ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿರುವುದರಿಂದ 41 ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

***
ಸಾರ್ವಜನಿಕರು ಮತದಾನ ಬಹಿಷ್ಕಾರದ ವದಂತಿಗಳಿಗೆ ಕಿವಿಗೊಡದೇ ಮುಕ್ತ ಹಾಗೂ ನ್ಯಾಯಯುತ ಮತದಾನ ಪ್ರಕ್ರಿಯೆಗೆ ಸಹಕರಿಸಬೇಕು

-ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಬಾಗಲಕೋಟೆ ಜಿಲ್ಲಾಧಿಕಾರಿ

***

ಮೊದಲನೇ ಹಂತದಲ್ಲಿ 162 ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಹೆಚ್ಚಿನ ನಿಗಾ ಇಡಲಾಗಿದೆ. ಭದ್ತತೆಗೆ 1050 ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ.

-ಲೋಕೇಶ ಜಗಲಾಸರ್, ಬಾಗಲಕೋಟೆ ಎಸ್ಪಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT