ಮಂಗಳವಾರ, ಆಗಸ್ಟ್ 16, 2022
27 °C

ಸಸಾಲಟ್ಟಿ: ಮತಗಟ್ಟೆ ಎದುರು ವಾಮಾಚಾರದ ಕುರುಹು ಚರ್ಚೆಗೆ ಗ್ರಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಗ್ರಾಮ ಪಂಚಾಯ್ತಿ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ ರಬಕವಿ-ಬನಹಟ್ಟಿ ತಾಲೂಕಿನ ಸಸಾಲಟ್ಟಿ ಗ್ರಾಮದಲ್ಲಿ ವಾಮಾಚಾರದ ಕುರುಹುಗಳು ಕಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಚುನಾವಣೆಯಲ್ಲಿ ಗೆಲ್ಲಲು ಕೆಲವರು ವಾಮಾಚಾರದ ಮೊರೆ ಹೋಗಿದ್ದಾರೆ.

ಭಾನುವಾರ ನಸುಕಿನಲ್ಲಿ ಮತದಾನ ನಡೆಯಲಿರುವ ಶಾಲೆಯ ಆವರಣ ಸೇರಿದಂತೆ  ಗ್ರಾಮದ ಹಲವು ಕಡೆ ವಾಮಾಚಾರದ ಕುರುಹುಗಳು ಕಂಡಿದ್ದು, ಗೊಂಬೆ, ನಿಂಬೆಹಣ್ಣು, ಗುಲಾಲ್ ಹಾಕಿ  ರಸ್ತೆ ಮಧ್ಯೆ ಒಡೆದ ಕುಂಬಳಕಾಯಿ ಇಟ್ಟು ಹೋಗಿರುವುದು ಕಂಡು ಬಂದಿದೆ.

ಇದನ್ನು ಕಂಡ ಅಭ್ಯರ್ಥಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.   ವಾಮಾಚಾರ ಮಾಡಿ ಇಡಲಾಗಿದ್ದ ವಸ್ತುಗಳನ್ನು ತೆಗೆದು ನೋಡಿದಾಗ ಅದರಲ್ಲಿ ಅಭ್ಯರ್ಥಿಯೊಬ್ಬರ ಹೆಸರು ಬರೆದಿರುವುದು ಕಂಡು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು