ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುನಗುಂದ | ಅಧಿಕಾರಿಗಳ‌ ನಿರ್ಲಕ್ಷ್ಯ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆ

Last Updated 6 ಜೂನ್ 2022, 6:22 IST
ಅಕ್ಷರ ಗಾತ್ರ

ಹುನಗುಂದ: ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ತಾಲ್ಲೂಕು ಘಟಕದ ವತಿಯಿಂದ ಬೆಳಿಗ್ಗೆ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ನಾಗಲಿಂಗ ನಗರದ ಜನರಿಗೆ ಸಂಚರಿಸಲು ಅಡಚಣೆಯಾಗುತ್ತಿದೆ. ಈ ಮೊದಲು ಏಕಪಥ ರಸ್ತೆ ಇತ್ತು. ಈಗ ದ್ವಿಪಥ ರಸ್ತೆಯಾಗಿರುವುದರಿಂದ ಹೆಚ್ಚಿನ ವಾಹನಗಳು ಸಂಚರಿಸುತ್ತಿವೆ. ಹೀಗಾಗಿ ಸಾರ್ವಜನಿಕರು, ಶಾಲಾ ಕಾಲೇಜು ಮಕ್ಕಳು ಜೀವ ಭಯದಲ್ಲಿ ಸಂಚರಿಸುವಂತಾಗಿದೆ‌‌ ಎಂದು ದೂರಿದರು.

ಈ ಮಾರ್ಗದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಖಂಡಿಸಿ ರಸ್ತೆ ತಡೆ ನಡೆಸಿ, ಘೋಷಣೆ ಕೂಗಿದರು.

ಅಧಿಕಾರಿಗಳ‌ ನಿರ್ಲಕ್ಷ್ಯ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆ
ಅಧಿಕಾರಿಗಳ‌ ನಿರ್ಲಕ್ಷ್ಯ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT