ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ | ಸಂಯುಕ್ತಾ ಪಾಟೀಲ ಬಿರುಸಿನ ಪ್ರಚಾರ

Published 6 ಏಪ್ರಿಲ್ 2024, 16:17 IST
Last Updated 6 ಏಪ್ರಿಲ್ 2024, 16:17 IST
ಅಕ್ಷರ ಗಾತ್ರ

ಬಾಗಲಕೋಟೆ: ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಶನಿವಾರ ನಗರದ ವಿವಿಧ ದೇವಸ್ಥಾನ, ಕಾಂಗ್ರೆಸ್‌ ಮುಖಂಡರ ಮನೆಗಳಿಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.

ವಿದ್ಯಾಗಿರಿಯ ಸಾಯಿ ಮಂದಿರ, ಮುಚಖಂಡಿ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ನಂತರ ನೆರೆದಿದ್ದ ಕಾರ್ಯಕರ್ತರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಗೆಲ್ಲಿಸಬೇಕು. ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿನ ಅಂಶಗಳನ್ನು ಮನೆ ಮನೆಗೆ ತಲುಪಿಸಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಜನರಿಗೆ ಈಗಾಗಲೇ ತಲುಪಿದೆ. ಅದನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು. ಪಕ್ಷ ನುಡಿದಂತೆ ನಡೆದಿರುವುದನ್ನು ತಿಳಿಸಬೇಕು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಾರಿ ಮಾಡಲಿರುವ ಗ್ಯಾರಂಟಿಗಳ ಬಗ್ಗೆಯೂ ತಿಳಿಸಬೇಕು ಎಂದು ಹೇಳಿದರು.

ಕ್ಷೇತ್ರದಾದ್ಯಂತ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ನಾವು ಗೆಲ್ಲಲೇಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT