ಶುಕ್ರವಾರ, ಆಗಸ್ಟ್ 6, 2021
21 °C

ಕೋವಿಡ್ 19: ಜಿಲ್ಲೆಯಲ್ಲಿ ಮತ್ತಿಬ್ಬರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಬಾದಾಮಿ ತಾಲೂಕು ಢಾಣಕಶಿರೂರಿನ ಮಹಿಳೆ ಸೇರಿದಂತೆ ಇಬ್ಬರು ಕೋವಿಡ್–19 ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಶನಿವಾರ ಆಸ್ಪತ್ರೆಯಿಂದ ಮನೆಗೆ ತೆರಳಿದರು. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪ್ರಮಾಣ ಪತ್ರ ವಿತರಿಸಿದರು. ಆಸ್ಪತ್ರೆಯ ಸಿಬ್ಬಂದಿ ಗುಣಮುಖರಾದವರ ಕೈಗಳಿಗೆ ಸೀಲ್ ಹಾಕಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು. ಶನಿವಾರ ಜಿಲ್ಲೆಯಲ್ಲಿ ಕೋವಿಡ್–19 ಯಾವುದೇ ಪ್ರಕರಣ ದೃಢಪಟ್ಟಿಲ್ಲ. 

ಜಿಲ್ಲೆಯಲ್ಲಿ ಇಲ್ಲಿಯವರೆಗೆ 91 ಪ್ರಕರಣ ದೃಢಪಟ್ಟಿವೆ. 75 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. 14 ಪ್ರಕರಣ ಸಕ್ರಿಯವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು