ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ | ಅದ್ದೂರಿ ಗಣೇಶ ಮೆರವಣಿಗೆ

Published : 15 ಸೆಪ್ಟೆಂಬರ್ 2024, 15:23 IST
Last Updated : 15 ಸೆಪ್ಟೆಂಬರ್ 2024, 15:23 IST
ಫಾಲೋ ಮಾಡಿ
Comments

ಬಾಗಲಕೋಟೆ: ಗಣೇಶ ಉತ್ಸವದ ಒಂಬತ್ತನೇ ದಿನವಾದ ಭಾನುವಾರ ಜಿಲ್ಲೆಯ ವಿವಿಧೆಡೆ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯಿತು.

ಮಾತೃಭೂಮಿ ಯುವಕ ಮಂಡಳದ ಹಿಂದೂ ಮಹಾಗಣಪತಿ ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಸಾಂಗ್ಲಿಯ 130 ಜನರನ್ನೊಳಗೊಂಡ ಡೋಲ್‌ತಾಷಾ ಪಥಕ ತಂಡದ ತಾಳಕ್ಕೆ ಯುವಕರು ಹೆಜ್ಜೆ ಹಾಕಿದರು. ಮಂಗಳೂರಿನ ಓಂಕಾರ ಕುಣಿತ ಭಜನಾ ಮಂಡಳಿ ಹಾಗೂ ಉಡುಪಿಯ 35 ಜನರ ಚಂಡೆ ವಾದನ ತಂಡಗಳು ಗಮನ ಸೆಳೆದವು. ಜನರು ರಸ್ತೆ ಬದಿಗಳಲ್ಲಿ ನಿಂತು ವೀಕ್ಷಿಸಿದರು.

ಮಧ್ಯಾಹ್ನ 2.30ಕ್ಕೆ ಆರಂಭವಾದ ಮೆರವಣಿಗೆ ರಾತ್ರಿಯವರೆಗೂ ಮುಂದುವರೆದಿತ್ತು. ಯುವಕರು ಸಂಭ್ರಮದಿಂದ ಹೆಜ್ಜೆ ಹಾಕುತ್ತಿದ್ದರು.‌

ಬಾಗಲಕೋಟೆಯಲ್ಲಿ ಭಾನುವಾರ ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕಲಾ ತಂಡಗಳು
ಬಾಗಲಕೋಟೆಯಲ್ಲಿ ಭಾನುವಾರ ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕಲಾ ತಂಡಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT