ಬಾಗಲಕೋಟೆ: ಜಿಲ್ಲೆಯ ಜಾನುವಾರುಗಳಿಗೆ ಏ.23 ರಿಂದ ಮೇ 22ರ ವರೆಗೆ 9ನೇ ಸುತ್ತಿನ ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾಮಟ್ಟದ ನಿರ್ವಹಣಾ ಸಮಿತಿ ಪೂರ್ವಭಾವಿ ಸಿದ್ಧತೆಗಳ ಸಭೆಯಲ್ಲಿ ಮಾತನಾಡಿದ ಅವರು, ಲಸಿಕಾ ಕಾರ್ಯಕ್ರಮದ ಜೊತೆಗೆ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಮತ್ತು ನಾಯಿಗಳಿಗೆ ರೇಬಿಸ್ ಲಸಿಕೆ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಎಸ್.ಎಚ್. ಕರಡಿಗುಡ್ಡ ಮಾತನಾಡಿ, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪ್ರತಿ 6 ತಿಂಗಳಿಗೊಮ್ಮೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಜಾನುವಾರುಗಳಿಗೆ ಈ ರೋಗ ಬಂದರೆ ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುತ್ತದೆ. ಲಸಿಕೆ ಹಾಕಿಸಿ ರೋಗ ನಿಯಂತ್ರಿಸಲು ಮತ್ತು ಕಾಲು ಬಾಯಿ ರೋಗ ಮುಕ್ತ ಜಿಲ್ಲೆಯಾಗಿಸಬೇಕು ಎಂದು ಮನವಿ ಮಾಡಿದರು.

20ನೇ ಜಾನುವಾರು ಗಣತಿ ಪ್ರಕಾರ ಜಿಲ್ಲೆಯಲ್ಲಿ 15,28,158 ಜಾನುವಾರುಗಳಿದ್ದು, ಸದ್ಯ 11,750 ಡೋಜ್ ಲಸಿಕೆ ಲಭ್ಯವಿರುತ್ತದೆ. ಜಿಲ್ಲೆಯಲ್ಲಿ 3,938 ಬ್ಲಾಕ್ಗಳನ್ನು ಮಾಡಲಾಗಿದೆ. ಇಲಾಖೆ ಹಾಗೂ ಇಲಾಖೇತರರು ಸೇರಿ 524 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಲಸಿಕೆದಾರರು ಮನೆ ಬಾಗಿಲಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ರೈತ-ಬಾಂಧವರು ಲಸಿಕಾ ಸಿಬ್ಬಂದಿಗೆ ಸಹಕರಿಸಿ, ತಪ್ಪದೇ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-19-1193002462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.