ರಾಂಪುರ: ಬಾಗಲಕೋಟೆ ತಾಲ್ಲೂಕಿನ ಬೆನಕಟ್ಟಿ ಗ್ರಾಮದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಮಾರ್ಚ್ 29ರಂದು ಐವರು ಕಳ್ಳರ ತಂಡವೊಂದು ಮಧ್ಯರಾತ್ರಿಯಲ್ಲಿ ಐದಾರು ಮನೆಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಲ್ಲದೇ, ಕೀಲಿ ಹಾಕಿದ್ದ ಸುರೇಶ ಗೌಡರ ಎಂಬುವವರ ಮನೆಯ ಬೀಗದ ಕೀಲಿ ಮುರಿದು 5 ಗ್ರಾಂ ತೂಕದ ಬಂಗಾರದ ಆಭರಣ ಕದ್ದಿದ್ದಾರೆ.

ಅಂದೇದೇ ದಿನ ಚಂದ್ರಶೇಖರ ಪಾಟೀಲ ಎಂಬುವವರ ಮನೆಯನ್ನೂ ಜಾಲಾಡಿರುವ ಕಳ್ಳರು, ಮತ್ತೊಂದು ಮನೆಯ ಬಳಿ ಸುಳಿದಾಡುತ್ತಿದ್ದಾಗ ಮುಂಬಾಗಿಲಿನಲ್ಲಿ ಮಲಗಿದ್ದ ಯಜಮಾನ ಎಚ್ಚರಗೊಂಡು ಕೂಗಿದಾಗ ಅವನಿಗೆ ಕಲ್ಲೆಸೆದು ಪರಾರಿಯಾಗಿದ್ದಾರೆ.

ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡಿರುವ ಐದು ಜನರ ತಂಡದಚಟುವಟಿಕೆ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ಬಾಗಲಕೋಟೆ ಗ್ರಾಮೀಣ ಪೋಲಿಸರಿಗೆ ಗ್ರಾಮಸ್ಥರು ನೀಡಿದ್ದಾರೆ.

ಇದೇ ತಂಡ ಗ್ರಾಮದಲ್ಲಿ ಬುಧವಾರ ಎರಡು ಮನೆಗಳ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಆ ಮನೆಗಳ ಜನ ಎಚ್ಚರಗೊಂಡಿದ್ದರಿಂದ ಕಳ್ಳರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಕಳ್ಳರ ಹಾವಳಿಯಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದು, ಗ್ರಾಮ ಪಂಚಾಯಿತಿ ಹಾಗೂ ಬಾಗಲಕೋಟೆ ಗ್ರಾಮೀಣ ಪೋಲಿಸರಿಗೆ ಮನವಿ ನೀಡಿ, ರಾತ್ರಿ ಸಮಯದಲ್ಲಿ ಗಸ್ತು ತಿರುಗುವ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ. ಜೊತೆಗೆ ಗ್ರಾಮ ಪಂಚಾಯಿತಿಯಿಂದ ಗ್ರಾಮದಲ್ಲಿ ಡಂಗುರ ಸಾರಿಸಿದ್ದು, ರಾತ್ರಿ ಸಮಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಗಸ್ತು ವ್ಯವಸ್ಥೆಗೆ ಕ್ರಮ: ಕಳ್ಳರ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ರಾತ್ರಿ ಸಮಯದಲ್ಲಿ ಗಸ್ತು ತಿರುಗುವ ವ್ಯವಸ್ಥೆ ಮಾಡುವುದಾಗಿ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಗಿರೀಶ ಗ್ರಾಮಸ್ಥರಿಗೆ ಭರವಸೆ ನೀಡಿದ್ದು, ಮಾರ್ಚ್ 29ರಂದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪರಿಶೀಲಿಸಿ ತಂಡವನ್ನು ಸೆರೆ ಹಿಡಿಯುವ ನಿಟ್ಟಿನಲ್ಲಿ ಕ್ರಮವಹಿಸುವುದಾಗಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-19-1964026678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.