ಬಾಗಲಕೋಟೆ: ಅಪ್ರಾಪ್ತ ಬಾಲಕನೊಂದಿಗೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿ, ಕೊಲೆ ಮಾಡಿದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 20 ವರ್ಷ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ.
ಪೋಕ್ಸೊ ಕಾಯ್ದೆಯಡಿ ಕಟಗೇರಿಯ ಅಪರಾಧಿ ಸಾಬು ಪರಗೊಂಡ ಜಕಾತಿಗೆ ಶಿಕ್ಷೆ ವಿಧಿಸಿ, ನ್ಯಾಯಾಧೀಶ ಸೈಯದ್ ಬಲೇಗೂರ ರೆಹಮಾನ್ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ, ಮೂರು ತಿಂಗಳು ಸಾದಾ ಜೈಲು ಶಿಕ್ಷೆಗೆ ಆದೇಶಿಸಿದ್ದಾರೆ.
ಬಾಲಕನ ತಂದೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ₹70 ಸಾವಿರ ಸಹಾಯಧನ ನೀಡಲು ಆದೇಶಿಸಲಾಗಿದೆ.
ಬಾಲಕನ ದೇಹದ ಮೇಲೆ ರೇಜರ್‌ನಿಂದ ಗಾಯಗೊಳಿಸಿ, ಕ್ರೂರವಾಗಿ ಹತ್ಯೆ ಮಾಡಿರುವುದು ವಿಚಾರಣೆಯಲ್ಲಿ ಸಾಬೀತಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕ ಎಂ.ಎಂ. ಹಂಡಿ ಸರ್ಕಾರದ ಪರ ವಾದಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.