ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ನಾಯನೇಗಲಿ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹15.50 ಲಕ್ಷ ಜಪ್ತಿ ಮಾಡಿದ್ದಾರೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಪಿಎಂಜಿಎಸ್ವೈ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಕಾಶಕುಮಾರ ಜಾದವ ನೇತೃತ್ವದ ಎಫ್ಎಸ್ಟಿ ತಂಡ ವಾಹನಗಳ ಪರಿಶೀಲನೆ ನಡೆಸುತ್ತಿದ್ದು, ಈ ವೇಳೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ನಗದು ಪತ್ತೆಯಾಗಿದೆ.

ಬಬಲೇಶ್ವರದಿಂದ ಕುಷ್ಟಗಿ ಕಡೆ ಹೊರಟಿದ್ದ ಕಾರಿನಲ್ಲಿ ನಗದು ಇತ್ತು. ಸೂಕ್ತ ದಾಖಲೆಗಳಿಲ್ಲದ ಕಾರಣ ಹಣ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.