ಬಾಗಲಕೋಟೆ: ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ಮೋಸ ಮತ್ತು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಆರೋಪಿಸಿದ್ದಾರೆ.

ಸುಪ್ರಿಂಕೋರ್ಟ್ ಆದೇಶದ ಅನುಸಾರ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಹಂಚಿಕೆ ಮಾಡಲು ಎರಡೂವರೆ ವರ್ಷಗಳವರೆಗೆ ಕಾಲಹರಣ ಮಾಡಿ ಅಂತಿಮವಾಗಿಯೂ ಸರಿಯಾಗಿ ಹಂಚಿಕೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ15 ರಿಂದ ಶೇ17ಕ್ಕೆ ಹೆಚ್ಚಿಸಿತ್ತು. ಈಗ ಅದರ ಪ್ರಮಾಣವನ್ನು ಇಳಿಸಲಾಗಿದ್ದು, ಎ,ಬಿ ವರ್ಗಗಳಿಗೆ ಕಡಿಮೆ ಮಾಡುವ ಮೂಲಕ ಅನ್ಯಾಯ ಮಾಡಲಾಗಿದೆ. ಸಿ ವರ್ಗಕ್ಕೂ ಕಡಿಮೆ ಮಾಡಲಾಗಿದೆಯಲ್ಲದೇ, ಅಲೆಮಾರಿಗಳಿಗೆ ಪ್ರತ್ಯೇಕವಾಗಿ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದ ಪರಿಶಿಷ್ಟ ಸಮುದಾಯಗಳಿಗೆ ಮಾಡಿರುವ ಅನ್ಯಾಯಕ್ಕೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-19-1772510846

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.