ಬಾಗಲಕೋಟೆ: ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇವರಲ್ಲಿ ಮುಧೋಳ ತಾಲ್ಲೂಕಿನ ಐವರು, ಬೀಳಗಿಯ ಮೂವರು ಹಾಗೂ ಬಾದಾಮಿಯ ಒಬ್ಬರು ಸೇರಿದ್ದಾರೆ.

ಇಲ್ಲಿಯವರೆಗೆ ಹಸಿರು ವಲಯದಲ್ಲಿದ್ದ ಬೀಳಗಿ ತಾಲ್ಲೂಕಿನಲ್ಲಿ ಇದೇ ಮೊದಲ ಬಾರಿಗೆ ಮೂವರಿಗೆ ಸೋಂಕು ದೃಢಪಟ್ಟಿದೆ.

'ಎಲ್ಲರೂ ಮುಂಬೈನಿಂದ ಮರಳಿದ ಕಾರ್ಮಿಕರು. ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ ಇದ್ದರು. ಅಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ ಪಾಸಿಟಿವ್ ಬಂದಿದೆ. ಯಾರಿಗೂ ಸೋಂಕಿನ ಲಕ್ಷಣ ಇಲ್ಲ, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಡಿಎಚ್ಒ ಡಾ.ಅನಂತ ದೇಸಾಯಿ 'ಪ್ರಜಾವಾಣಿ'ಗೆ ತಿಳಿಸಿದರು.

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 88ಕ್ಕೆ ಏರಿಕೆಯಾಗಿದೆ. 71 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ:Covid-19 Karnataka Update: ಉಡುಪಿ 150, ಕಲಬುರ್ಗಿ 100 ಮಂದಿಯಲ್ಲಿ ಸೋಂಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.