ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಕೋವಿಡ್‌‌ಗೆ 78 ವರ್ಷದ ವೃದ್ಧೆ ಬಲಿ

Last Updated 10 ಜುಲೈ 2020, 8:29 IST
ಅಕ್ಷರ ಗಾತ್ರ

ಬಾಗಲಕೋಟೆ: ಕೋವಿಡ್-19 ಸೋಂಕಿಗೆ 78 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇಲ್ಲಿನ ವಿದ್ಯಾಗಿರಿಯ 8ನೇ ಕ್ರಾಸ್ ನಿವಾಸಿಯಾದ ವೃದ್ಧೆ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 5 ರಂದು ಕೊರೊನಾ ಸೋಂಕು ಇರುವುದು ದೃಡಪಟ್ಟಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಕೋವಿಡ್-19 ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT