ಬಾಗಲಕೋಟೆ/ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಬೆಳಿಗ್ಗೆ ಆರಂಭವಾಗಿದೆ.

ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸ್ಥಾನಕ್ಕೆ ಹೊಸ ಪ್ರತಿನಿಧಿಯ ಆಯ್ಕೆಗಾಗಿ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಕಣದಲ್ಲಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಮರ್ಥ್ ಶಾಮನೂರು ಹಾಗೂ ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ ನಡುವೆ ತೀವ್ರ ಪೈಪೋಟಿ ಇದೆ. ಎಸ್ಡಿಪಿಐ ಕೂಡ ಕಣದಲ್ಲಿದೆ.

ಜನರು ಸಾಲುಗಟ್ಟಿ ನಿಂತು ಮತ ಚಲಾಯಿಸಲು ಮುಂದಾಗಿದ್ದಾರೆ. ಗ್ರಾಮೀಣ ಪ್ರದೇಶದ ಜನರೂ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಬಿಸಿಲು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಳಿಗ್ಗೆಯೇ ಮತದಾನ ಕೇಂದ್ರತಳತ್ತ ಸಾಗುತ್ತಿದ್ದಾರೆ.

ಮತಗಟ್ಟೆಗಳ ಮುಂದೆ ಕಾಂಗ್ರೆಸ್, ಬಿಜೆಪಿ ಏಜೆಂಟರು ಮತ ಚೀಟಿಗಳನ್ನು ನೀಡುತ್ತಿದ್ದಾರೆ. ಮತದಾನ ಚುರುಕು ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.