ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ | ತಾಲ್ಲೂಕು ಹೋರಾಟ ಸಮಿತಿ ಮನವಿಗೆ DC ಸ್ಪಂದನೆ: ಏ.10ಕ್ಕೆ ಸಭೆ ನಿಗದಿ

Published 7 ಏಪ್ರಿಲ್ 2024, 13:39 IST
Last Updated 7 ಏಪ್ರಿಲ್ 2024, 13:39 IST
ಅಕ್ಷರ ಗಾತ್ರ

ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಿಸುವ ಕುರಿತು ಸಭೆ ನಡೆಸಬೇಕೆಂಬ ನಮ್ಮ ಮನವಿಗೆ ಜಿಲ್ಲಾಧಿಕಾರಿ ಸ್ಪಂದಿಸಿದ್ದು, ಏ.10 ರಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಹೋರಾಟ ಸಮಿತಿ ಪದಾಧಿಕಾರಿಗಳೊಂದಿಗೆ ಬಾಗಲಕೋಟೆಯಲ್ಲಿ ಸಭೆ ನಡೆಸಲು ಅವಕಾಶ ನೀಡಿದ್ದಾರೆ ಎಂದು ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಹೇಳಿದರು.

ಪಟ್ಟಣದ ಚನ್ನಮ್ಮ ವೃತ್ತದಲ್ಲಿ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಕೈಗೊಂಡಿರುವ ಅನಿರ್ದಿಷ್ಟಾವಧಿ ಹೋರಾಟದ 725ನೇ ದಿನವಾದ ಭಾನುವಾರ ಅವರು ಮಾತನಾಡಿದರು.

ಮಹಾಲಿಂಗಪುರವನ್ನು ತಾಲ್ಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಣೆ ಮಾಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದೇವು. ಚುನಾವಣಾಧಿಕಾರಿಗಳು ಬಹಿಷ್ಕಾರ ಹಿಂಪಡೆಯಲು ಮನವಿ ಮಾಡಿದ್ದರು. ಆದರೆ, ಜಿಲ್ಲಾಧಿಕಾರಿ ಜೊತೆಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದೇವು. ನಮ್ಮ ಮನವಿಗೆ ಜಿಲ್ಲಾಧಿಕಾರಿ ಸ್ಪಂದಿಸಿದ್ದಾರೆ ಎಂದರು.

ರಫೀಕ್ ಮಾಲದಾರ, ದುಂಡಪ್ಪ ಇಟ್ನಾಳ, ಮಹಾಲಿಂಗಪ್ಪ ಅವರಾದಿ, ಭೀಮಶಿ ನಾಯಕ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT